Satya Darshana
ಬಿಸಿ ಬಿಸಿ ಸುದ್ದಿ
Otherಜಿಲ್ಲೆ

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 9: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ, ಕೆ.ಎಎಸ್ ಬ್ಯಾಂಕಿಂಗ್, ಗ್ರುಪ್ – ಸಿಎಸ್‍ಎಸ್‍ಸಿ, ಆರ್‍ಆರ್‍ಬಿ, ಜ್ಯೂಡಿಷಿಯಲ್ ಸರ್ವಿಸಸ್/ಏರ್‍ಹಾಸ್ಟೆಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿಯ ಪರಿಶಿಷ್ಟ ವರ್ಗಗಳ ಅರ್ಹ ಅಭ್ಯರ್ಥಿಗಳು ಅರ್ಜಿಸಬಹುದು. ಅರ್ಜಿಯನ್ನು www.sw.kar.nic.in ನಲ್ಲಿ ಸೆಪ್ಟೆಂಬರ 20ರೊಳಗಾಗಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 5,00,000/-ದೊಳಗಿರಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9482300400 ಹಾಗೂ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗದಗ/ಮುಂಡರಗಿ/ಶಿರಹಟ್ಟಿ/ರೋಣ/ನರಗುಂದ ಇವರಿಗೆ ಸಂಪರ್ಕಿಸಬಹುದಾಗಿದೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳಿಸಿ ಸಾಮಾನ್ಯ ಸಭೆ ನಡೆಸಿದ ಪಿಡಿಓ!

satyadarshana

ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023 ಸಲಹೆ ದೂರುಗಳಿಗಾಗಿ ಸಹಾಯವಾಣಿ

satyadarshana

ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ : ಜಿಲ್ಲಾ ನ್ಯಾ. ಬಸವರಾಜ

satyadarshana

Leave a Comment