Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಭಿಕ್ಷಾಟನೆಯ ಮಕ್ಕಳ ರಕ್ಷಣೆ

 

ಗದಗ: ( ಸತ್ಯ ದರ್ಶನ ) ಸೆಪ್ಟೆಂಬರ್ 13 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಮಾಡಿ ಗಜೇಂದ್ರಗಡ ತಾಲೂಕಿನ ರಾಜೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಾಲಕಾಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು.

ಭೇಟಿ ನೀಡಿದ ಸಂದರ್ಭದಲ್ಲಿ ವಯಸ್ಕ ವ್ಯಕ್ತಿಗಳು ಭಿಕ್ಷೆ ಬೇಡುತ್ತಿರುವುದು ಕಂಡು ಬಂದಿರುತ್ತದೆ. ಆದರೆ ಯಾವುದೇ ಅಪ್ರಾಪ್ತರು / ಮಕ್ಕಳು ಭಿಕ್ಷೆಬೇಡುವುದು ಕಂಡು ಬಂದಿರುವುದಿಲ್ಲ. ಸ್ಥಳೀಯ ನಿವಾಸಿಗಳು, ಭಕ್ತರು ಮತ್ತು ಆಡಳಿತಾಧಿಕಾರಿಗಳನ್ನು ವಿಚಾರಿಸಲಾಗಿ, ಜಾತ್ರೆ ಹಬ್ಬ-ಹರಿದಿನ ವಿಶೇಷ ದಿನಗಳಂದು ಭಕ್ತರ ಸಂಖ್ಯೆ ಹೆಚ್ಚಾಗುವ ಕಾರಣ ಪಕ್ಕದ ಜಿಲ್ಲೆಗಳಾದ ಕೊಪ್ಪಳ, ಬಾಗಲಕೋಟೆಯಿಂದ ಭಿಕ್ಷೆಬೇಡಲು ಬರುತ್ತಾರೆ ಎಂದು ತಿಳಿಸಿರುತ್ತಾರೆ.

ಇನ್ನು ಮುಂದೆ ಯಾರಾದರೂ ಭಿಕ್ಷೆಬೇಡುವುದು ಕಂಡುಬಂದರೆ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗೆ ಕರೆ ಮಾಡುವಂತೆ ತಿಳಿಸಲಾಯಿತು. ಭಿಕ್ಷಾಟನೆಯಲ್ಲಿ ತೊಡಗಿದ ವಯಸ್ಕರಿಗೆ ತಿಳುವಳಿಕೆ ನೀಡಿ ಇನ್ನು ಮುಂದೆ ಭಿಕ್ಷಾಟನೆ ಮಾಡದಂತೆ ತಿಳಿವಳಿಕೆ ನೀಡಿ ಬರಲಾಯಿತು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಡಾ.ಬಾಬು ಜಗಜೀವನರಾಮ್ ಮತ್ತು ಅಂಬೇಡ್ಕರ್ ಅವರು ನಮ್ಮಗೆ ಎರಡು ಕಣ್ಣುಗಳ: ಹೇಮಲತಾ ನಾಯಕ

satyadarshana

ರಾಜ್ಯದ ವಿಧಾನಪರಿಷತ್‍ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಡಿಸೆಂಬರ್ 10ರಂದು ಮತದಾನ

satyadarshana

ವನಮಹೋತ್ಸವ-2023ಕ್ಕೆ ಜುಲೈ 1ರಂದು ಚಾಲನೆ

satyadarshana

Leave a Comment