Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಹೆಬ್ಬಾಳ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರಿಗೆ ಗ್ರಾಮಸ್ಥರಿಂದ ಅಭೂತಪೂರ್ವ ಸ್ವಾಗತ.

ಶಿರಹಟ್ಟಿ ( ಸತ್ಯ ದರ್ಶನ ) ಸೆ.17: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಜಿಲ್ಲೆಯ ಕಟ್ಟಕಡೆಯ ಗ್ರಾಮವಾದ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರಿಗೆ ಗ್ರಾಮಸ್ಥರಿಂದ ಅಭೂತಪೂರ್ವ ಸ್ವಾಗತ ದೊರೆಯಿತು.

ಜಿಲ್ಲಾಧಿಕಾರಿಗಳು ಕನಕವಾಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸುತ್ತಿದ್ದಂತೆ ಗ್ರಾಮದ ಮಹಿಳೆಯರು ಪೂರ್ಣ ಕುಂಬ, ಮೇಳದೊಂದಿಗೆ ಜಿಲ್ಲಾಧಿಕಾರಿಗಳಿಗೆ ಅರಿಶಿನ ಕುಂಕುಮ ನೀಡುವ ಮೂಲಕ ಸ್ವಾಗತ ಕೋರಿದರು.

ಕನಕವಾಡದಿಂದ ಹೆಬ್ಬಾಳದ ವರೆಗೆ ಅಲಂಕೃತ ಎತ್ತಿನ ಬಂಡಿಯಲ್ಲಿ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಹೆಬ್ಬಾಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಅವರನ್ನು ಅಪಾರ ಸಂಖ್ಯೆಯಲ್ಲಿ ಸೇರಿದಂತಹ ಗ್ರಾಮಸ್ಥರು ಮೆರವಣಿಗೆ ಮೂಲಕ ಗ್ರಾಮಕ್ಕೆ ಬರ ಮಾಡಿಕೊಂಡರು.

ಉಪವಿಭಾಗಾಧಿಕಾರಿ ಅನ್ನಪೂರ್ಣ, ತಹಶೀಲ್ದಾರ ಕಲಗೌಡ ಪಾಟೀಲ ಜಿಲ್ಲಾಧಿಕಾರಿಗಳಿಗೆ ಸಾಥ ನೀಡಿದರು.

Related posts

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಲೋಕಾಯುಕ್ತ ಬಲೆಗೆ….!

satyadarshana

ಶೀಘ್ರದಲ್ಲೇ ಹೊಸ ಪ್ರವಾಸೋದ್ಯಮ ನೀತಿ ಜಾರಿ :ಸಚಿವ ಎಚ್.ಕೆ.ಪಾಟೀಲ್

satyadarshana

ಸತ್ಯದರ್ಶನ ಕನ್ನಡ ದಿನಪತ್ರಿಕೆ.07.04.2023

satyadarshana

Leave a Comment