Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಟ್ರೆಂಡ್ದೇಶ-ವಿದೇಶಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗಾಂಧೀಜಿ ಗ್ರಾಮ ಸ್ವರಾಜ್ಯ ಕನಸನ್ನು ನನಸಾಗಿಸಲು ಶ್ರಮಿಸೋಣ.ವೈಶಾಲಿ ಎಂ.ಎಲ್

ಶಿರಹಟ್ಟಿ ( ಸತ್ಯದರ್ಶನ ) ಸೆ.17: ಜಿಲ್ಲೆಯ ಕಟ್ಟಕಡೆಯ ಗ್ರಾಮದ ಸಾರ್ವಜನಿಕರಿಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ಕೊಡುವುದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮುಖ್ಯ ಉದ್ದೇಶಾವಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ನುಡಿದರು.

      ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

       ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪಹಣಿ ತಿದ್ದುಪಡಿ, ಪಿಂಚಣಿ ಆದೇಶ ಸೇರಿದಂತೆ ಇತರೆ ಸೌಲಭ್ಯಗಳನ್ನು ಸ್ಥಳದಲ್ಲಿಯೇ ವಿತರಿಸುವದು ಕಾರ್ಯಕ್ರಮದ ಆಶಯವಾಗಿದೆ.

ಸದರಿ ಕಾರ್ಯಕ್ರಮದಲ್ಲಿ ವೈಯಕ್ತಿಕ, ಸಮುದಾಯಿಕ ಸೌಲಭ್ಯಗಳ ಕುರಿತು ಅಹವಾಲು ಸಲ್ಲಿಸಿದ್ದಲ್ಲಿ ಆದ್ಯತೇ ಮೇರೆಗೆ ಸ್ಥಳದಲ್ಲಿಯೇ ಪರಿಹಾರ ಒದಗಿದಲಾಗುವದು. ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳಿಗೆ ಅಗತ್ಯದ ಪ್ರಸ್ತಾವನೆ ಸಲ್ಲಿಸಲಾಗುವದು ಎಂದರು.

       ಯಾವುದೇ ಗ್ರಾಮಗಳ ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವವು ಅವಶ್ಯಕವಾಗಿದೆ. ತಮ್ಮ ಗ್ರಾಮಗಳಲ್ಲಿ ನಿಯಮಿತವಾಗಿ ಗ್ರಾಮ ಸಭೆಗಳನ್ನು ಆಯೋಜಿಸುವ ಮೂಲಕ ಗ್ರಾಮದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು.

ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ದತೇ ನೀಡುವ ಮೂಲಕ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ತಿಳಿಸಿದರು.

ಗ್ರಾಮದ ಪ್ರತಿಯೊಂದು ಮನೆಗೂ ಶೌಚಾಲಯಗಳನ್ನು ನಿರ್ಮಿಸಿಕೊಂಡು ಅವುಗಳನ್ನು ಬಳಸುವಂತೆ ತಿಳಿಸಿದ ಅವರು ಗ್ರಾಮದಲ್ಲಿ ಸರ್ಕಾರಿ ಆಸ್ತಿ ಒತ್ತುವರಿ ಕುರಿತು ಅರ್ಜಿ ಸಲ್ಲಿಸಿದಲ್ಲಿ ಅವುಗಳಿಗೂ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವದು ಎಂದು ಜಿಲ್ಲಾಧಿಕಾರಿ ವೈಶಾಲಿ ಇದೇ ಸಂದರ್ಭದಲ್ಲಿ ತಿಳಿಸಿದರು.

         ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ ಅಧ್ಯಕ್ಷೆ ಪುಷ್ಪಾ ಕಾಮರೆಡ್ಡಿ, ಉಪಾಧ್ಯಕ್ಷೆ ಗೌರಮ್ಮ ಬಂಡಿವಡ್ಡರ, ಗ್ರಾಮ ಪಂಚಾಯತ ಸರ್ವ ಸದಸ್ಯರು, ಉಪವಿಭಾಗಾಧಿಕಾರಿ ಅನ್ನಪೂರ್ಣ, ತಹಶೀಲ್ದಾರ ಕಲಗೌಡ ಪಾಟೀಲ, ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಾಟೀಲ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಗಣ್ಯರು, ಸಾರ್ವಜನಿಜರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಅಧಿಕಾರಿ ಹರ್ತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

        ವಿವಿಧ ಮಳಿಗೆಗಳಿಗೆ ಭೇಟಿ: ಹೆಬ್ಬಾಳ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ, ಆರೋಗ್ಯ, ಕೃಷಿ, ತೋಟಗಾರಿಕೆ ಇಲಾಖೆ ಸೇರಿದಂತ ವಿವಿಧ ಇಲಾಖೆಗಳ ಮಳಿಗೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ತಮ್ಮ ಇಲಾಖೆಯ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ತಿಳಿಸಿದರು.

      ಗ್ರಾಮ ಪ್ರದಕ್ಷಿಣೆ : ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಪಶು ಆಸ್ಪತ್ರೆ, ಗ್ರಾಮ ಪಂಚಾಯತ, ನ್ಯಾಯ ಬೆಲೆ ಅಂಗಡಿ, ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಜನರ ಸಮಸ್ಯೆಗಳನ್ನು ಆಲಿಸಿದರು.ದಲಿತ ಕಾಲನಿಗೆ ಭೇಟಿ ನೀಡಿದ ಅವರು ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು.

Related posts

ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಮಾಜ ಸುಧಾರಣೆ ಸಾಧ್ಯ ಪ್ರತಿಯೊಬ್ಬರ ಜೀವನದಲ್ಲಿ ಗುರಿ ಮತ್ತು ಗುರು ಅನಿವಾರ್ಯ: ಸಚಿವ ಸಿ.ಸಿ.ಪಾಟೀಲ

satyadarshana

ಸತ್ಯದರ್ಶನ ಕನ್ನಡ ದಿನಪತ್ರಿಕೆ.26.04.2023

satyadarshana

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ

satyadarshana

Leave a Comment