Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗದಗ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಕೋಟಿ ಕಂಠ ಗಾಯನ ಆಯೋಜಿಸಿ ಯಶಸ್ವಿಗೊಳಿಸಿ> ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ಅಧಿಕಾರಿಗಳಿಗೆ ಕರೆ

ಗದಗ .ಅ.21: ಗದಗ ಜಿಲ್ಲೆಯ ಜಿಲ್ಲಾಡಳಿತ ಸೇರಿದಂತೆ ಪ್ರಮುಖ ದೇವಸ್ಥಾನ,  ಕ್ರೀಡಾಂಗಣ, ಹಾಗೂ ವಿವಿಧೆಡೆ ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಲು  ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಅಧಿಕಾರಿಗಳಿಗೆ ಕರೆ ನೀಡಿದರು.
         ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರದಂದು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಸಭೆಗೂ ಮುನ್ನ ಕನ್ನಡ ಸಂಸ್ಕøತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್ ಸೇರಿದಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಅವರೊಂದಿಗೆ ವಿಡಿಯೋ ಸಂವಾದ ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದಂತೆ ಜಿಲ್ಲೆಯಲ್ಲಿ ಕಾರ್ಯಕ್ರಮ ಯಶಸ್ವಿಗೆ ಮುಂದಾಗೋಣ ಎಂದರು.
        ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆಯೊಂದಿಗೆ ಆಯ್ದ ಇತರೆ 5 ಗೀತೆಗಳನ್ನು  ಎಲ್ಲರೂ ಸಾಮೂಹಿಕವಾಗಿ ಹಾಡಬೇಕು. ಕಾರ್ಯಕ್ರಮಕ್ಕೆ  ನೋಂದಣಿ ಮಾಡಿಸಿದವರು ಬಿಳಿ ಸಮವಸ್ತ್ರಗಳನ್ನು ಧರಿಸಿ ನಿಗದಿತ ಸ್ಥಳಗಳಲ್ಲಿ ಪಾಲ್ಗೊಳ್ಳಬೇಕು. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಗ್ರಾಮ ಪಂಚಾಯತ್ , ತಾಲೂಕು ಪಂಚಾಯತ್  ಸೇರಿದಂತೆ ವಿವಿಧ ಇಲಾಖೆಗಳ ನೌಕರರು ಸಾರ್ವಜನಿಕರು ಪಾಲ್ಗೊಳ್ಳೂವಿಕೆಯ ಮೂಲಕ ಕಾರ್ಯಕ್ರಮ ಯಶಸ್ವಿಗೆ ತಿಳಿಸಿದರು.
           ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾದ ಸ್ಥಳಗಳಲ್ಲಿ ಕೋಟಿ ಕಂಠ ಗಾಯನಕ್ಕೆ ಆಗಮಿಸಿದ ಅತಿಥಿಗಳಿಗೆ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳಿಗಾಗಿ 4 ನಿಮಿಷ ನಿಗದಿಪಡಿಸಿದೆ. ಅದರಂತೆ ನಾಡಗೀತೆಗೆ 2.30 ನಿಮಿಷ , ಆಯ್ದ 5 ಗೀತೆಗಳನ್ನು ಹಾಡಲು 20 ರಿಂದ 25 ನಿಮಿಷ ನಿಗದಿಪಡಿಸಿದ್ದು ಕೊನೆಯಲ್ಲಿ ವಂದನಾರ್ಪಣೆ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಗುವುದು.  
          ಕನ್ನಡ ಸಂಸ್ಕøತಿ ಇಲಾಖೆಯಿಂದ ನೀಡಲಾದ ನಿಗದಿತ ವೆಬ್‍ಸೈಟ್‍ನಲ್ಲಿ ಜನಸಾಮಾನ್ಯರು, ಸಂಘ ಸಂಸ್ಥೆಗಳು , ನೋಂದಣಿ ಮಾಡಿಕೊಳ್ಳಬಹುದಾಗಿದೆ.  ಕನ್ನಡಾಭಿಮಾನ ಮೆರೆಯಲು ಕನ್ನಡನಾಡಿನ ಜನತೆಗೆ ಇದೊಂದು ಸುವರ್ಣಾವಕಾಶವಾಗಿದ್ದು ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯವೆಂದರು. ಪೌರಕಾರ್ಮಿಕರು, ಅಟೋ ಚಾಲಕರು, ಕನ್ನಡಾಭಿಮಾನಿ ಸಂಘಟನೆಗಳು ಸೇರಿದಂತೆ ಎಲ್ಲ ಸಂಘಸಂಸ್ಥೆಗಳು ಸಹ ನೋಂದಣಿ ಮಾಡಿಕೊಂಡು ಕೋಟಿ ಕಂಠ ಗಾಯನದಲ್ಲಿ ಪಾಲ್ಗೊಳ್ಳಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಹೇಳಿದರು.                                                  
               ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ ಮಾತನಾಡಿ  ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮೊದಲಿಗೆ ಕುವೆಂಪು ಅವರ ನಾಡಗೀತೆಯಾದ ಜೈ ಭಾರತ ಜನನಿಯ ತನುಜಾತೆ , ನಂತರ ಜಿಲ್ಲೆಯರೇ ಆದ ಹುಯಿಲಗೋಳ ನಾರಾಯಣರಾಯರು ರಚಿಸಿದ ಉದಯವಾಗಲಿ ಚೆಲುವ ಕನ್ನಡ ನಾಡು, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಡಾ. ಡಿ.ಎಸ್. ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾಚೇತನ, ಡಾ. ಹಂಸಲೇಖಾ ಅವರ ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಏಕಕಾಲದಲ್ಲಿ ಹಾಡಲು ಗೀತೆಗಳನ್ನು ನಿಗದಿಪಡಿಸಲಾಗಿದೆ. ಎಲ್ಲ ಸಂಬಂಧಿತ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಸೂಚಿಸಿದರು.  
           ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ  ವೀರಯ್ಯ ಸ್ವಾಮಿ ಬಿ ಅವರು ಮಾತನಾಡಿ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಇಲಾಖೆ ವತಿಯಿಂದ ಅಭಿನಂದನಾ ಪತ್ರವನ್ನು ನೀಡಲಾಗುತ್ತದೆ. ನೋಂದಣಿಗಾಗಿ https://kannadasiri.karnataka.gov.in/kkg/public   ಲಿಂಕ್  ಬಳಕೆ ಮಾಡಬೇಕು. ಕಾರ್ಯಕ್ರಮ ಯಶಸ್ವಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಹಕಾರ ನೀಡುವಂತೆ ಕೋರಿದರು.

        ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ್, ಕಾರ್ಮಿಕ ಇಲಾಖೆ  ಅಧಿಕಾರಿ ಸುಧಾ ಗರಗ , ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಮಾರುತಿ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಮೆಹಬೂಬ ತುಂಬರಮಟ್ಟಿ,  ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠಲಕುಮಾರ್ ಜಾಬಗೌಡ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.  

           

3 Attachments • Scanned by Gmail

Related posts

ಕೋಟಿ ಖರ್ಚಾದರೂ ಹನಿ ನೀರೂ ಸಿಕ್ಕಿಲ್ಲ

satyadarshana

‘ಗಂಗಾ ಕಲ್ಯಾಣ’ ಪಂಪಸೆಟ್‌ಗಳು ಸದ್ಬಳಕೆ ಮಾಡಿಕೊಂಡು ಫಲಾನುಭವಿಗಳು ಆರ್ಥಿಕ ಪ್ರಗತಿ ಹೊಂದಬೇಕು’ಬಯ್ಯಾಪುರ ಅಮರೇಗೌಡ,

satyadarshana

ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ

satyadarshana

Leave a Comment