ಗದಗ :ಅ 25: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನವನ್ನು ಕಾರ್ಯಕ್ರಮವನ್ನು ಅಕ್ಟೋಬರ್ 28 ರಂದು ಜಿಲ್ಲೆಯ ವಿವಿಧೆಡೆ ಆಯೋಜಿಸುವ ಮೂಲಕ ಕನ್ನಡಿಗರಾದ ನಾವೆಲ್ಲರೂ ಭಾಷಾಭಿಮಾನ ಮೆರೆಯೋಣ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಹೇಳಿದರು.
ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಮಂಗಳವಾರದಂದು ಜರುಗಿದ ಕೋಟಿ ಕಂಠ ಗಾಯನದ ತಾಲೀಮಿನಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯ ಪ್ರಮುಖ ದೇವಸ್ಥಾನ , ಕ್ರೀಡಾಂಗಣ ವಿವಿಧೆಡೆ ಕೋಟಿ ಕಂಠ ಗಾಯನ ಕಾರ್ಯಕ್ರಮ ವಿಜೃಂಭಣೆಯಿಂದ ಮೊಳಗಲಿದೆ. ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾದ ಸ್ಥಳಗಳಲ್ಲಿ ಸರಿಯಾದ ಸಮಯಕ್ಕೆ ಕೋಟಿ ಕಂಠ ಗಾಯನ ಜರುಗಲಿದೆ. ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆಯೊಂದಿಗೆ ಆಯ್ದ ಇತರೆ 5 ಗೀತೆಗಳನ್ನು ಎಲ್ಲರೂ ಸಾಮೂಹಿಕವಾಗಿ ಹಾಡಲಾಗುವುದು ಎಂದರು.
ಬಿಳಿ ಸಮವಸ್ತ್ರ : ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಿದವರು ಬಿಳಿ ಸಮವಸ್ತ್ರಗಳನ್ನು ಧರಿಸಿ ನಿಗದಿ ಪಡಿಸಿದ ಸ್ಥಳಗಳಲ್ಲಿ ಪಾಲ್ಗೊಳ್ಳಬೇಕು. ವಿವಿಧತೆಯಲ್ಲಿ ಏಕತೆ ಮೆರೆಯೋಣ. À ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಗ್ರಾಮ ಪಂಚಾಯತ್ , ತಾಲೂಕು ಪಂಚಾಯತ್, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ನೌಕರರು ಸಾರ್ವಜನಿಕರು, ಜನಪ್ರತಿನಿಧಿಗಳು ಪಾಲ್ಗೊಳ್ಳೂವಿಕೆಯ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು.
ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ ಅವರು ಮಾತನಾಡಿ ಕನ್ನಡ ಸಂಸ್ಕøತಿ ಇಲಾಖೆಯಿಂದ ನೀಡಲಾದ ನಿಗದಿತ ವೆಬ್‍ಸೈಟ್‍ನಲ್ಲಿ ಜನಸಾಮಾನ್ಯರು, ಸಂಘ ಸಂಸ್ಥೆಗಳು , ನೋಂದಣಿ ಮಾಡಿಕೊಳ್ಳಬಹುದಾಗಿದೆ. ಕನ್ನಡಾಭಿಮಾನ ಮೆರೆಯಲು ಕನ್ನಡನಾಡಿನ ಜನತೆಗೆ ಇದೊಂದು ಉತ್ತಮ ಅವಕಾಶವಾಗಿದೆ. ಸರ್ವರ ಪಾಲ್ಗೊಳ್ಳುವಿಕೆ ಅಗತ್ಯ. ಪೌರಕಾರ್ಮಿಕರು, ಅಟೋ ಚಾಲಕರು, ಕನ್ನಡಾಭಿಮಾನಿ ಸಂಘಟನೆಗಳು ಸೇರಿದಂತೆ ಎಲ್ಲ ಸಂಘಸಂಸ್ಥೆಗಳು ಸಹ ನೋಂದಣಿ ಮಾಡಿಕೊಂಡು ಕೋಟಿ ಕಂಠ ಗಾಯನದಲ್ಲಿ ಪಾಲ್ಗೊಳ್ಳಬೇಕು. ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಅಭಿನಂದನಾ ಪತ್ರವನ್ನು ನೀಡಲಾಗುತ್ತದೆ. ನೋಂದಣಿಗಾಗಿ https://kannadasiri.karnataka.gov.in/kkg/public/ ಲಿಂಕ್ ಬಳಕೆ ಮಾಡಬೇಕು. ಕಾರ್ಯಕ್ರಮ ಯಶಸ್ವಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಹಕಾರ ನೀಡುವಂತೆ ಕೋರಿದರು.
ರಿಹರ್ಸಲ್‍ದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಹಿರೇಮಠ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದು ಗಾಯನ ತಾಲೀಮಿನಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
