ಗದಗ( ಸತ್ಯ ದರ್ಶನ ) ಅ. 31: ದಿ.ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಗದಗನಲ್ಲಿರುವ ಕೆ.ಎಲ್.ಇ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಬೆಳಗ್ಗೆ “ರಾಷ್ಟ್ರೀಯ ಏಕತಾ ದಿವಸ” ಆಚರಿಸಲಾಯಿತು.
ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ಕೆ.ಎಲ್.ಇ. ಶಿಕ್ಷಣ ಸಂಸ್ಥೆಯಿಂದ ಸೈಕಲ್ ಜಾಥಾ ಹಾಗೂ ಮೋಟರ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮೊಹಮದ್ ಮೊಹಶಿನ್ ಅವರು ಹಸಿರು ನಿಶಾನ ತೋರುವ ಮೂಲಕ ಚಾಲನೆ ನೀಡಿದರು. ಮೋಟರ್ ಹಾಗೂ ಸೈಕಲ್ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಮುಕ್ತಾಯಗೊಂಡಿತು.
ಈ ವೇಳೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ಕೆ.ಎಲ್.ಇ. ಸಂಸ್ಥೆಯ ಪ್ರಾಚಾರ್ಯರು, ನೆಹರು ಯುವ ಕೇಂದ್ರದ ಅಧಿಕಾರಿಗಳು, ಶಿಕ್ಷಣ ಸಂಸ್ಥೆಯ ಬೋಧಕ ಹಾಗೂ ಭೋಧಕೇತರ ಸಿಬ್ಬಂದಿಗಳು, ಜಿಲ್ಲಾ ಕ್ರೀಡಾ ಶಾಲೆಯ ಕ್ರೀಡಾಪಟುಗಳು, ತರಬೇತಿದಾರರ, ಎನ್.ಸಿ.ಸಿ. ಅಧಿಕಾರಿ ಪ್ರಭಾತ ಸೇರಿದಂತೆ ವಿವಿಧ ಕ್ರೀಡಾಪಟುಗಳು ಪಾಲ್ಗೊಂಡು ಏಕತಾ ದಿವಸ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
