Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ದಮನಿತ ಮಹಿಳೆಯರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ .

ಗದಗ : ನವೆಂಬರ್ 9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರ್ ಸೆಟ್ ಸಂಸ್ಥೆಯ ಸಂಯೋಗದೊಂದಿಗೆ ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಶನ್ ಯೋಜನೆಯಡಿ ದಮನಿತ ಮಹಿಳೆಯರಿಗೆ ವಿವಿಧ ರೀತಿಯ ಫೆನೈಯಲ್ & ವಿವಿಧ ರೀತಿಯ ಮೇಣಬತ್ತಿಯನ್ನು ತಯಾರಿಕೆ ತರಬೇತಿಯನ್ನು ಆರ್‍ಸೆಟ್ ಸಂಸ್ಥೆ ಕೆ.ವಿ.ಕೆ ಹುಲಕೋಟಿಯಲ್ಲಿ ಆಯೋಜಿಸಲಾಗಿತ್ತು.

       ಸದರಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ನಂತರ ಅವರು ಮಾತನಾಡಿ ಮಹಿಳೆಯರು ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯ ಮಾಹಿನಿಗೆ ಬರಬೇಕು. ಇಂತಹ ತರಬೇತಿಗಳು ಮಹಿಳೆಯರಿಗೆ ಹೆಚ್ಚು ಪ್ರಯೋಜನಕಾರಿಯಾಗುತ್ತವೆ ಎಂದು ತಿಳಿಸಿದರು. 

      ಶ್ರೀಮತಿ ದಾಕ್ಷಾಯಣಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್ ಸೆಟ್ ಸಂಸ್ಥೆ ನಿರ್ದೇಶಕರು ತರಬೇತಿ ಪಡೆದ ಮಹಿಳೆಯರಿಗೆ ಅನುದಾನ & ಮಾರುಕಟ್ಟೆ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಾಗಿದ್ದರು.

Related posts

ರಾಜ್ಯದ ಬಹುತೇಕ ಕಡೆ ಮುಂಗಾರು ಪೂರ್ವ ಮಳೆಯಿಂದ ಜನಜೀವನ ಅಸ್ತವ್ಯಸ್ತ, ಬೆಳೆಗಳಿಗೆ ಭಾರಿ ಹಾನಿ

satyadarshana

ಕಲಬುರಗಿ: ಮೇಯರ್​ ಪಟ್ಟಕ್ಕಾಗಿ ಜೆಡಿಎಸ್​ನದ್ದು ಕಾದು ನೋಡುವ ತಂತ್ರ

satyadarshana

ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳು:ಕುರಿತು ಸಿಎಂಗೆ ಪತ್ರ ಬರೆದ.ಸಿದ್ದರಾಮಯ್ಯ

satyadarshana

Leave a Comment