Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜನಜಾಗೃತಿಗಾಗಿ ಕಾಲನಡಿಗೆ ಜಾಥಾ, ಪ್ರತಿಜ್ಞಾ ವಿಧಿ ಸ್ವೀಕಾರ

ಗದಗ: ನ.10: ಭಾರತ ಚುನಾವಣಾ ಆಯೋಗವು ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಆರಂಭಿಸಿದ್ದು, ಒಂದು ತಿಂಗಳ ಕಾಲ ಪ್ರತಿ ಮತಗಟ್ಟೆ ಅಧಿಕಾರಿ ತನ್ನ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ, ಮತದಾರ ಪಟ್ಟಿಯ ಸ್ವಚ್ಛತೆ (ಪರಿಷ್ಕರಣೆ) ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಅವರು ಬುಧವಾರ (ನ.9) ರಂದು ಬೆಳಿಗ್ಗೆ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿಗಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

2023 ರಲ್ಲಿ ಬರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆರಂಭವಾಗಿದೆ. ಮತದಾರ ಪಟ್ಟಿಯ ಪರಿಷ್ಕರಣೆಯಲ್ಲಿ ನಿಧನರಾದವರ, ಸ್ಥಳಾಂತರಗೊಂಡವರ ಮತ್ತು ಬೇರೆ ಮತಕ್ಷೇತ್ರದ ಮತದಾರ ಪಟ್ಟಿಗೆ ಹೆಸರು ವರ್ಗಾಯಿಸಿಕೊಂಡಿರುವ ಕುರಿತು ಪರಿಶೀಲಿಸಲಾಗುತ್ತದೆ. ನಿಗದಿತ ನಮೂನೆಗಳಲ್ಲಿ ಮಾಹಿತಿ ತುಂಬಿ, ಮತದಾರ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಮತದಾರನ ಮತದಾರ ಚೀಟಿಯ ಸಂಖ್ಯೆಗೆ ಆಧಾರ್ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಮತದಾರ ಚೀಟಿಗೆ ಆಧಾರ ಸಂಖ್ಯೆ ಜೋಡಣೆ ಮಾಡುವುದರಿಂದ ಮತದಾರನ ಹೆಸರು ಬೇರೆ ಮತದಾರ ಪಟ್ಟಿಯಲ್ಲಿ ನಕಲು ಆಗುವುದು ತಪ್ಪುತ್ತದೆ. ಪ್ರತಿ ಮತಗಟ್ಟೆ ಮಟ್ಟದ ಅಧಿಕಾರಿ ತನ್ನ ವ್ಯಾಪ್ತಿಯ ಪ್ರತಿ ಮನೆಗೆ ಭೇಟಿ ನೀಡಿ, ಪ್ರತಿ ಮತದಾನ ಕುರಿತು ಮಾಹಿತಿ ಸಂಗ್ರಹಿಸಿ, ಪರಿಷ್ಕರಿಸುತ್ತಾರೆ. ಆಧಾರ್ ಸಂಖ್ಯೆ ಜೋಡಣೆಗೆ ಕ್ರಮ ವಹಿಸುತ್ತಾರೆ. ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕೆಂದು ಅವರು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ ಅವರು ಮಾತನಾಡಿ, 18 ವರ್ಷ ತುಂಬಿದ ಪ್ರತಿಯೊಬ್ಬ ವ್ಯಕ್ತಿ ಮತದಾರ ಪಟ್ಟಿಗೆ ತನ್ನ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ವರ್ಷದಲ್ಲಿ ನಾಲ್ಕು ಸಲ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೆ ಕೇಂದ್ರ ಚುನಾವಣಾ ಆಯೋಗ ಅವಕಾಶ ನೀಡಿದೆ. ಸದೃಢ ಪ್ರಜಾಪ್ರಭುತ್ವ ಸ್ಥಾಪಿಸಲು ಮತದಾರ, ಮತದಾನ ಮುಖ್ಯವಾಗಿರುತ್ತವೆ ಎಂದರು. 18 ವರ್ಷ ತುಂಬಿದ ಹೊಸ ಮತದಾರರಲ್ಲಿ ಮತ್ತು ವಿದ್ಯಾರ್ಥಿಗಳ ಪಾಲಕರಲ್ಲಿ ಮತದಾರ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಜನಜಾಗೃತಿ ಕಾಲನಡಿಗೆ ಜಾಥಾ ಪೂರ್ವದಲ್ಲಿ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶಾಲಾ-ಕಾಲೇಜು ವಿಧ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ನಂತರ ಜರುಗಿದ ಕಾಲನಡಿಗೆ ಜಾಥಾವು ನಗರದ ಮುನ್ಸಿಪಲ್ ಕಾಲೇಜು ಆವರಣದಿಂದ ಆರಂಭವಾಗಿ ಗಾಂಧೀ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಪುನ: ಮುನ್ಸಿಪಲ್ ಕಾಲೇಜು ಆವರಣ ತಲುಪುವ ಮೂಲಕ ಮುಕ್ತಾಯಗೊಂಡಿತು. ಕಾಲನಡಿಗೆ ಜಾಥಾದಲ್ಲಿ ಮತದಾರರ ನೋಂದಣಿ ಫಲಗಳನ್ನು ಹಾಗೂ ಘೋಷಣೆಗಳನ್ನು ಕೂಗಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ಜಿ.ಪಂ. ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೆಹಬೂಬ ತುಂಬರಮಟ್ಟಿ. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಬಸವರಾಜ ಗಿರಿತಿಮ್ಮನವರ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಶಾಲಾ-ಕಾಲೇಜು ವಿಧ್ಯಾರ್ಥಿಗಳು ಹಾಜರಿದ್ದರು.

Related posts

ಅಂಬೇಡ್ಕ‌ರ್ ಕುರಿತು ಅಮಿತ ಶಾ ಹೇಳಿಕೆ: ತೀವ್ರ ಖಂಡನೆ. ಅಂದಪ್ಪ ಮಾದರ 

satyadarshana

ಕೊಪ್ಪಳ ಜಿಲ್ಲೆ ಮುದ್ಲಾಪುರ ಗ್ರಾಮಸ್ಥರು ನಮ್ಮ ಬವಣೆ ಕೇಳುವವರು ಯಾರು ಇಲ್ಲ

satyadarshana

ಜ.17ರಂದು ಕುಷ್ಟಗಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

satyadarshana

Leave a Comment