Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಂದ ಪರಿಶೀಲನಾ ಸಭೆ.

ಗದಗ : ನ.16: ಜಾತಿ ಪ್ರಮಾಣ ಪತ್ರಗಳನ್ನು ವಿತರಿಸುವ ಸಂದರ್ಭದಲ್ಲಿ ಅತ್ಯಂತ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ವಿತರಿಸಲು ನಿಗಾವಹಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾತಿ ಪ್ರಮಾಣ ಪತ್ರಗಳನ್ನು ವಿತರಿಸುವ ಸಂದರ್ಭದಲ್ಲಿ ಯಾವುದೇ ಲೋಪಗಳಾಗದಂತೆ ನಿಗಾವಹಿಸಬೇಕು. ಜಾತಿ ಪ್ರಮಾಣ ಪತ್ರಗಳನ್ನು ಪಡೆಯುವಂತಹ ವಿಧ್ಯಾರ್ಥಿಗಳು ನಾಳಿನ ದಿವಸ ಉದ್ಯೋಗದ ಸಮಯದಲ್ಲಿ ಜಾತಿ ಪ್ರಮಾಣ ಪತ್ರದಲ್ಲಿನ ದೋಷಗಳಿಂದಾಗಿ ಉದ್ಯೋಗದಿಂದ ವಂಚಿತರಾಗದಂತೆ ನಿಗಾವಹಿಸಬೇಕು. ಜಾತಿ ಪ್ರಮಾಣ ಪತ್ರಕ್ಕಾಗಿ ಸಲ್ಲಿಸಲಾದ ಅರ್ಜಿಗಳನ್ನು ಕುಲಂಕುಷವಾಗಿ ಪರಿಶೀಲಿಸಿ ಅದರಲ್ಲಿ ಯಾವುದಾದರೂ ಸಂದೇಹಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ಷೇತ್ರ ಭೇಟಿ ಮಾಡಿ ಜಾತಿ ಪ್ರಮಾಣ ಪತ್ರಗಳನ್ನು ಒದಗಿಸಲು ತಿಳಿಸಿದರು.

ಜಿಲ್ಲೆಯಲ್ಲಿನ ವಸತಿ ಶಾಲೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಅಗತ್ಯದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಅಲ್ಲದೇ ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅನೀರಿಕ್ಷಿತ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು. ವಸತಿ ನಿಲಯಗಳಲ್ಲಿ ಸರ್ಕಾರದಿಂದ ದೊರಕಿಸಲಾಗುವ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೆಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿರುವ ವಿವಿಧ ಸೌಲಭ್ಯ ಹಾಗೂ ವಿಧ್ಯಾರ್ಥಿ ವೇತನಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಇಲಾಖೆಯಿಂದ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಆನಲೈನ್ ಮೂಲಕ ವಿತರಿಸಲಾಗುತ್ತಿದ್ದು ಈ ಕುರಿತು ಗ್ರಾಮೀಣ ಭಾಗದ ಜನರಿಗೆ ಇಲಾಖೆಯ ಹೆಚ್ಚಿನ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನಾನೂಕುಲವಾಗುತ್ತಿದ್ದು ಈ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅಲ್ಲದೇ ವಿಧ್ಯಾರ್ಥಿ ವೇತನ ಸೇರಿದಂತೆ ಇತರೆ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಯಾ ಗ್ರಾಮ ಪಂಚಾಯತಗಳಿಂದಲೇ ಆನಲೈನ್ ಮೂಲಕ ಅರ್ಜಿ ಸಲ್ಲಿಸಲು ಅಗತ್ಯದ ಕ್ರಮ ವಹಿಸಿ ಯೋಜನೆಗಳನ್ನು ಯಶಸ್ವಿಗೊಳಿಸಲು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾಗುವ ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಿಖರ ವರದಿ ಪಡೆದುಕೊಳ್ಳುವಂತೆ ತಿಳಿಸಿದರು. ಜಿಲ್ಲೆಯಲ್ಲಿನ ಅನಾಥ ಮಕ್ಕಳ ವರದಿ ಪಡೆದ ಅವರು ಅನಾಥ ಮಕ್ಕಳಿಗೆ  ಹಿಂದುಳಿದ ವರ್ಗಗಳಡಿ ಮೀಸಲಾತಿ ನೀಡಲು ಕ್ರಮ ವಹಿಸಲು ಶೀಘ್ರವೇ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವದು ಎಂದು ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮೆಹಬೂಬ ತುಂಬರಮಟ್ಟಿ ಮಾತನಾಡಿ ಜಿಲ್ಲೆಯಲ್ಲಿ ಮೆಟ್ರಿಕ ಪೂರ್ವ 33, ಮೆಟ್ರಿಕ ನಂತರ 29, ಅನುದಾನಿತ ವಸತಿ ನಿಲಯಗಳು 18, ಮೋರಾರ್ಜಿ ದೇಸಾಯಿ 4 ಒಟ್ಟು 84 ವಸತಿ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಮೆಟ್ರಿಕ ಪೂರ್ವ ವಿಧ್ಯಾರ್ಥಿನಿಲಯಗಳಲ್ಲಿ ನಿಗದಿಪಡಿಸಲಾದ 1865 ವಿಧ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ರಾಜ್ಯ ವಲಯದ ಯೋಜನೆಯಡಿ ಬಿಡುಗಡೆಯಾದ 2632.59 ಲಕ್ಷ ರೂಗಳಲ್ಲಿ 1278.83 ಲಕ್ಷ ರೂ ವೆಚ್ಚವಾಗಿದ್ದು ಜಿಲ್ಲಾ ಪಂಚಾಯತ ಕಾರ್ಯಕ್ರಮಗಳಲ್ಲಿ 2366.83 ಲಕ್ಷ ರೂ.ಗಳಲ್ಲಿ 1036.68 ಲಕ್ಷ ರೂ ವೆಚ್ಚವಾಗಿರುತ್ತದೆ. ಕಳೆದ ಆರ್ಥಿಕ ಸಾಲಿನಲ್ಲಿ 20754 ವಿಧ್ಯಾರ್ಥಿಗಳಿಗೆ 219.61 ಲಕ್ಷ ರೂ.ಗಳನ್ನು ಕೇಂದ್ರ ಪುರಸ್ಕøತ ಯೋಜನೆಯಡಿ ಹಿಂದುಳಿದ ವಿಧ್ಯಾರ್ಥಿಗಳಿಗೆ ಮೆಟ್ರಿಕ ಪೂರ್ವ ವಿಧ್ಯಾರ್ಥಿವೇತನ ನೀಡಲಾಗಿದ್ದು ಪ್ರಸಕ್ತ ಸಾಲಿನ ವಿಧ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಆಯೋಗದ ಸದಸ್ಯರುಗಳಾದ ರಾಜಶೇಖರ ಬಿ.ಎಸ್., ಶ್ರೀಮತಿ ಕೆ.ಟಿ.ಸುವರ್ಣ, ಅರುಣಕುಮಾರ, ಶಾರದಾ ನಾಯಕ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ., ತಹಶೀಲ್ದಾರರು, ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಸಭೆಯ ನಂತರ ವಿವಿಧ ಸಮುದಾಯಗಳ ಮುಖಂಡರು, ಸಾರ್ವಜನಿಕರು ಆಯೋಗದ ಅಧ್ಯಕ್ಷರಿಗೆ ಮನವಿಗಳನ್ನು ಸಲ್ಲಿಸಿದರು.

Related posts

ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ

satyadarshana

ಕಾರಟಗಿ: ಮನೆಮನೆ ಭೇಟಿ, ಆಹ್ವಾನ ಪತ್ರಿಕೆ ನೀಡಿ ಮತದಾನ ಜಾಗೃತಿ

satyadarshana

ಅವೈಜ್ಞಾನಿಕ ಕಾಮಗಾರಿ ಸಾರ್ವಜನಿಕರಿಗೆ ತೊಂದರೆ

satyadarshana