
ಗದಗ : ಐತಿಹಾಸಿಕ ಲಕ್ಕುಂಡಿ ಉತ್ಸವವು ಫೆಬ್ರವರಿ 10 ರಿಂದ 12 ರವರೆಗೆ ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಸೆಪ್ಟೆಂಬರ್. ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಸಾರಿಗೆ ಬಸ್‌ಗಳಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹಾಗೂ ಎಂ ಸಿ ಇ ನಿಗಮದ ಅಧ್ಯಕ್ಷ ಎಂ ಎಸ್ ಕರಿಗೌಡ್ರ ಅವರು ಗದಗ ಹೊಸ ಬಸ್ ನಿಲ್ದಾಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಐತಿಹಾಸಿಕ ಲಕ್ಕುಂಡಿ ಉತ್ಸವಕ್ಕೆ ಎಲ್ಲ ಜಿಲ್ಲೆಗಳಿಗೆ ವಿವಿಧೆಡೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ದೊರೆಯಬೇಕು. ಇತರ ಜಿಲ್ಲೆಗಳಿಂದ ಬರುವವರಿಗೆ ಸುಗಮ ಸಾರಿಗೆ ಸಂಚಾರ ತಲುಪಬೇಕು ಎಂದು ಹೇಳಿದರು.
ಒಟ್ಟು 10 ಬಸ್ಸುಗಳನ್ನು ಉಚಿತವಾಗಿ ಸಾರ್ವಜನಿಕರಿಗೆ ಸಂಚರಿಸುವ ಸೌಲಭ್ಯವನ್ನು ಒದಗಿಸಲಾಗಿದೆ. ಗದಗಿನ ಹೊಸ ಬಸ್ ನಿಲ್ದಾಣ ಮತ್ತು ಹಳೇ ಬಸ್ ನಿಲ್ದಾಣದಿಂದ ನಿರಂತರವಾಗಿ ಬಸ್‌ಗಳು ಸಂಚರಿಸಲಿವೆ. ಸಾರ್ವಜನಿಕರು ಬಸ್‌ಗಳ ಉಚಿತ ಸೇವೆಯ ಪ್ರಯೋಜನ ಪಡೆಯಬೇಕು.
ಉದ್ಘಾಟನೆ ನಂತರ ಅದೇ ಬಸ್‌ನಲ್ಲಿ ಲಕ್ಕುಂಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಸಂಚರಿಸುವ ಮೂಲಕ ಮಾದರಿಯಾದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ., ಉಪವಿಭಾಗಾಧಿಕಾರಿ ಅನ್ನಪೂರ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಡಿಯುಡಿಸಿ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳೆ, ಪ್ರದೀಪ ನವಲಗುಂದ ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶೀನಯ್ಯ ಹಾಗೂ ಸಿಬ್ಬಂದಿಗಳು ಕಾರ್ಯ ನಿರ್ವಹಿಸಿದರು. .
