Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ನಗರದ ಟ್ಯಾಗೋರ ರಸ್ತೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ

ಗದಗ : ಮಾರ್ಚ 10: ಮತದಾನ ನಮ್ಮೆಲ್ಲರ ಹಕ್ಕಾಗಿದ್ದು ಕಡ್ಡಾಯವಾಗಿ ಮತದಾನ ಮಾಡೋಣ. ಪ್ರಜಾಪ್ರಭುತ್ವ ಬಲಿಷ್ಟಗೊಳಿಸುವಲ್ಲಿ ಮತದಾನವು ಪ್ರಮುಖ ಪಾತ್ರ ವಹಿಸಲಿದ್ದು ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ತಮ್ಮ ಮತ ಚಲಾಯಿಸಬೇಕು ಎಂದು  ಡಯಟ್ ಉಪನ್ಯಾಸಕರಾದ  ಶಿವಕುಮಾರ ಕುರಿಯುವರ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿಯಿಂದ  ಶುಕ್ರವಾರದಂದು  ನಗರದ ಟಾಗೋರ್ ರಸ್ತೆಯಲ್ಲಿ ವಿ.ವಿ.ಪ್ಯಾಟ್ ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ಪ್ರಸ್ತುತಪಡಿಸಿ ಮಾತನಾಡಿದರು.   ಅರ್ಹ ಮತದಾರರು ಚಲಾಯಿಸುವ ಮತವು ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿಪಡಿಸಿಕೊಳ್ಳಲು ವಿ.ವಿ.ಪ್ಯಾಟ ಯಂತ್ರ ಸಹಾಯವಾಗಲಿದೆ  ಎಂದರು.

ಪ್ರತಿ ಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇ.ವಿ.ಎಂ) ಹಾಗೂ ವಿ.ವಿ.ಪ್ಯಾಟ ಪೆಟ್ಟಿಗೆ ಇಡಲಾಗುತ್ತದೆ. ಮತದಾರ ಮತಗಟ್ಟೆಗೆ ಮತ ಚಲಾಯಿಸಲು ಬಂದಾಗ ಮತಯಂತ್ರದಲ್ಲಿ ಹಸಿರು ದೀಪ ಉರಿಯುತ್ತಿರುವದನ್ನು ಖಚಿತಪಡಿಸಿಕೊಂಡು ಬ್ಯಾಲೇಟ್ ಯುನಿಟನಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರು, ಚಿಹ್ನೆಯ ಎದುರು ಇರುವ ನೀಲಿ ಗುಂಡಿ ಒತ್ತುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ನಂತರ ಕೆಂಪು ದೀಪ ಹಾಗೂ ಬೀಪ್ ಸದ್ದು ಮತದಾನವಾಗಿರುವದನ್ನು ಖಚಿತಪಡಿಸುತ್ತದೆ. ಬಳಿಕ ಪಕ್ಕದಲ್ಲಿರುವ ವಿ.ವಿ.ಪ್ಯಾಟ ಯಂತ್ರದಲ್ಲಿ ತಾವು ಮತ ಚಲಾಯಿಸಿದ ಅಭ್ಯರ್ಥಿಯ ಕ್ರಮ ಸಂಖ್ಯೆ, ಹೆಸರು ಹಾಗೂ ಚಿಹ್ನೆಯನ್ನು ಒಳಗೊಂಡಿರುವ ಚೀಟಿಯನ್ನು ಏಳು ಸೆಕೆಂಡವರೆಗೆ ಮತದಾರ ನೋಡಿ ಮತದಾನವನ್ನು ಖಚಿತಪಡಿಸಿಕೊಳ್ಳಬಹುದು ಎಂದು ಶಿವಕುಮಾರ್ ಕುರಿಯುವರ ತಿಳಿಸಿದರು.  
 
ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುತ್ತಿದೆ ಎಂದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ಸಾದರಪಡಿಸಿದರು. ಈ ಸಂದರ್ಭದಲ್ಲಿ  ಬಿ.ಎಲ್.ಓಗಳಾದ  ಪಿ.ಸಿ.ಬಸವರಡ್ಡೇರ , ಒಡ್ಡಿನ, ಪಿಯು ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು  ಹಾಜರಿದ್ದರು.

Related posts

ಗದಗ ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

satyadarshana

ಸೂಡಿಯ ನಾಗಕುಂಡ ಮೆಟ್ಟಿಲು ಬಾವಿಯ ದತ್ತು ಸ್ವೀಕಾರದ ಒಡಂಬಡಿಕೆ

satyadarshana

ರಾಜ್ಯ ಮಟ್ಟದ ಸೇವಾಭೂಷಣ ಪ್ರಶಸ್ತಿಗೆ ಭಾಜನರಾದ ವೃಕ್ಷ ರಕ್ಷಕ ಅಮರೇಗೌಡ ಮಲ್ಲಾಪೂರ

satyadarshana

Leave a Comment