Satya Darshana
ಬಿಸಿ ಬಿಸಿ ಸುದ್ದಿ
Other

ಬೆಟಗೇರಿ ಮಜ್ಜಗಿಯವರ ಓಣಿಯಲ್ಲಿ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ

ಗದಗ: ಮಾರ್ಚ 10: ಮತದಾನ ಮಾಡುವುದು ನಮ್ಮ ಹಕ್ಕು, ಪ್ರಜಾಪ್ರಭುತ್ವದಲ್ಲಿ ನಮ್ಮ ಹಕ್ಕನ್ನು  ಭದ್ರಪಡಿಸಿಕೊಳ್ಳಲು ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದು ಲಕ್ಕುಂಡಿ ಸರಕಾರಿ ಬಾಲಕಿಯರ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ  ವಾ0iÀiï.ಎಚ್. ನದಾಫ್  ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿಯಿಂದ ಶುಕ್ರವಾರದಂದು ಬೆಟಗೇರಿಯ ಮಜ್ಜಗಿಯವರ ಓಣಿಯಲ್ಲಿ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕಯನ್ನು ಸಾರ್ವಜನಿಕರಿಗೆ ಪ್ರಸ್ತುತಪಡಿಸಿ ಮಾತನಾಡಿದರು.
ಪ್ರತಿ ಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇ.ವಿ.ಎಂ) ಹಾಗೂ ವಿ.ವಿ.ಪ್ಯಾಟ ಪೆಟ್ಟಗೆ ಇಡಲಾಗುತ್ತದೆ. ಮತದಾರ ಮತಗಟ್ಟೆಗೆ ಮತ ಚಲಾಯಿಸಲು ಬಂದಾಗ ಮತಯಂತ್ರದಲ್ಲಿ ಹಸಿರು ದೀಪ ಉರಿಯುತ್ತಿರುವದನ್ನು ಖಚಿತಪಡಿಸಿಕೊಂಡು ಬ್ಯಾಲೇಟ್ ಯುನಿಟ್‍ನಲ್ಲಿ ತಮ್ಮ ಆ0iÉ್ಕುಯ ಅಭ್ಯರ್ಥಿಯ ಹೆಸರು, ಚಿಹ್ನೆಯ ಎದುರು ಇರುವ ನೀಲಿ ಗುಂಡಿ ಒತ್ತುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ನಂತರ ಕೆಂಪು ದೀಪ ಹಾಗೂ ಬೀಪ್ ಸದ್ದು ಮತದಾನವಾಗಿರುವದನ್ನು ಖಚಿತಪಡಿಸುತ್ತದೆ. ಬಳಿಕ ಪಕ್ಕದಲ್ಲಿರುವ ವಿ.ವಿ.ಪ್ಯಾಟ ಯಂತ್ರದಲ್ಲಿ ತಾವು ಮತ ಚಲಾಯಿಸಿದ ಅಭ್ಯರ್ಥಿಯ ಕ್ರಮ ಸಂಖ್ಯೆ, ಹೆಸರು ಹಾಗೂ ಚಿಹ್ನೆಯನ್ನು ಒಳಗೊಂಡಿರುವ ಚೀಟಿಯನ್ನು ಏಳು ಸೆಕೆಂಡವರೆಗೆ ಮತದಾರ ನೋಡಿ, ಮತದಾನವನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು  ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತಗಳನ್ನು  ವಿವರಿಸಿ ಪ್ರಾತ್ಯಕ್ಷಿಕೆಯನ್ನು  ವೈ.ಎಚ್. ನದಾಫ್ ಸಾದರಪಡಿಸಿದರು.

ಮತದಾನದ ಅರಿವು ಮೂಡಿಸಲು  ಅರ್ಹ ಮತದಾರರು ಚಲಾಯಿಸುವ ಮತವು ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿಪಡಿಸಿಕೊಳ್ಳಲು ವಿ.ವಿ.ಪ್ಯಾಟ್ ಯಂತ್ರ ಸಹಾಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಬಿ.ಎಲ್.ಓ ಶಿವಲೀಲಾ ಬುಡ್ಡಾಪುರ ಹಾಗೂ ಮಜ್ಜಗಿಯವರ ಓಣಿಯ ಸಾರ್ವಜನಿಕರು ಉಪಸ್ಥಿತರಿದ್ದರು.
                                       

Related posts

ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ.

satyadarshana

🚨 ಸತ್ಯದರ್ಶನ ಕನ್ನಡ ದಿನಪತ್ರಿಕೆ.🚨14.06.2023✍🏿

satyadarshana

ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.

satyadarshana

Leave a Comment