Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕಾರಟಗಿ: ಮನೆಮನೆ ಭೇಟಿ, ಆಹ್ವಾನ ಪತ್ರಿಕೆ ನೀಡಿ ಮತದಾನ ಜಾಗೃತಿ

ಕೊಪ್ಪಳ ಮೇ 02 : ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವತಿಯಿಂದ ಮೇ 02ರಂದು ಮತದಾರನ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಮತದಾನದ ಕುರಿತು ಮಾಹಿತಿಯುಳ್ಳ ಆಹ್ವಾನ ಪತ್ರಿಕೆ ನೀಡಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.

ಕಾರಟಗಿ ತಾಪಂ ಇಓ ನರಸಪ್ಪ ಎನ್ ಅವರು ಮಾತನಾಡಿ, ಸಂವಿಧಾನಾತ್ಮಕವಾಗಿ ಮತ ಹಾಕುವುದು ನಮ್ಮ ಕರ್ತವ್ಯ, ಗ್ರಾಮದಲ್ಲಿನ ಪ್ರತಿಯೊಬ್ಬರೂ ಮತದಾನದಿಂದ ಯಾರು ಹೊರಗುಳಿಯಬಾರದು. ನಮ್ಮ ಗ್ರಾಮ ಪಂಚಾಯತಿಯಲ್ಲಿ ಶೇ.100 ರಷ್ಟು ಮತದಾನವಾಗಲು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕು ಎಂದರು. 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಾಯಿನಾಥ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರಕಾಶ್, ವೀರೇಶ್, ಅಂಗನವಾಡಿ ಕಾರ್ಯಕರ್ತೆಯರಾದ ಸೈನಾಜ್ ಬೇಗಂ, ಶರಣಮ್ಮ, ಸವಿತಾ, ಆಶಾ ಕಾರ್ಯಕರ್ತೆ ಜ್ಯೋತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳೆ ನಷ್ಟದಿಂದ ಮನನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ..

satyadarshana

ಸಚಿವರ ತಿಪಟೂರು ಮನೆಗೆ ಮುಂದೆ ಎನ್‌ಎಸ್‌ಯುಐ ದಿಢೀರ್‌ ಪ್ರತಿಭಟನೆ: ಖಾಕಿ ಚೆಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ..

satyadarshana

ಕವಿಗಳಿಗೆ ಲೋಕಾವಲೋಕನ ದೃಷ್ಟಿ ಇರಬೇಕು: ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಸಲಹೆ

satyadarshana

Leave a Comment