Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕಾಮಗಾರಿ ನಾಮ ಫಲಕದಲ್ಲಿ ಸಂಪೂರ್ಣ ಮಾಹಿತಿ ದಾಖಲಿಸಿ, ಜನರಿಗೆ ಮಾಹಿತಿ ಓದಗಿಸಿ : ಡಾ. ಸುಶೀಲಾ.ಬಿ

ರೋಣ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳುವ ಎಲ್ಲಾ

ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ನಾಮ ಫಲಕದಲ್ಲಿ ಅಳವಡಿಸಿ ಜನರಿಗೆ ಮಾಹಿತಿ ದೊರಕುವಂತೆ ಮಾಡುವುದು ಗ್ರಾಪಂ ಹಂತದ ಸಿಬ್ಬಂದಿ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ. ಹೇಳಿದರು.

ತಾಲೂಕಿನ ಮಲ್ಲಾಪುರ, ಮಾರನಬಸರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯ ಉದ್ಯೋಗ ಖಾತ್ರಿ ಯೋಜನೆಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮಾಡಿ ಅವರು ಮಾತನಾಡಿದರು.

ಮಲ್ಲಾಪೂರ, ಮಾರನಬಸರಿ ಗ್ರಾಮಗಳಲ್ಲಿ 2022-23 ಸಾಲಿನಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ರಸ್ತೆ ಕಾಮಗಾರಿ, ಸಿಸಿ ರಸ್ತೆಗಳನ್ನು

ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ ಅವರು, ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ನಾಮಫಲಕದಲ್ಲಿ ಅಳವಡಿಸಿ ಜನರಿಗೆ ಅದರಿಂದ ಮಾಹಿತಿ ದೊರಕುವಂತೆ ಮಾಡುವುದು ನಿಮ್ಮ ಕರ್ತವ್ಯ, ಹಾಗಾಗಿ ಯಾವುದೇ ರೀತಿಯಲ್ಲಿ ಅಪೂರ್ಣ ಮಾಹಿತಿ ಇದ್ದಲ್ಲಿ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಹೆಚ್ಚು ಆಸ್ತಿ ಸೃಜನೆ ಮಾಡುವ ಮೂಲಕ ಅವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಕೆಲಸ ಮಾಡಬೇಕು. ನೀವು ಮಾಡುವ ಸಿಸಿ ರಸ್ತೆಗಳು ಗುಣಮಟ್ಟ ದಿಂದ ಕೂಡಿರಬೇಕು ಗುಣಮಟ್ಟದಲ್ಲಿ ಯಾವುದೇ ರೀತಿಯ ಲೋಪ ಆಗದಂತೆ ತಾವು ಕಟ್ಟುನಿಟ್ಟಾಗಿ ನಿಗಾವಹಿಸುವ ಮೂಲಕ ಕಾಮಗಾರಿ ಲಾಭ ಜನ ಸಾಮಾನ್ಯರಿಗೆ ತಲುಪಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸಿಇಓ ಆಪ್ತ ಸಹಾಯಕ ಬಿ.ಎಸ್.ಕಪರದ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಲೋಹಿತ ಎಮ್, ಎಸ್. ಸಂಕನೂರ, ತಾಂತ್ರಿಕ ಸಹಾಯಕ ಪ್ರವೀಣ ಸೂಡಿ,ಐಇಸಿ ಮಂಜುನಾಥ, ತಾಂತ್ರಿಕ ಇಂಜಿನಿಯರ ಲಿಂಗರಾಜಗೌಡ ಮುದಿಗೌಡ್ರ, ಅಜಯ ಅಬ್ಬಿಗೇರಿ, ಬಿ.ಎಫ.ಟಿ ಈರಣ್ಣ ಬೇಲೆರಿ,ಶಿವು ಯಲಿಗಾರ. ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

Related posts

ಪಿಎಸ್ಐ ಪರೀಕ್ಷೆ ಅಕ್ರಮ ;16 ಆರೋಪಿಗಳ ಮೊಬೈಲ್​​​ ಲ್ಯಾಬ್​​ಗೆ ರವಾನೆ..!

satyadarshana

ಗಂಗಾವತಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪೋಕ್ಸೊ ಕಾಯ್ದೆಯಡಿ ವಿವಾಹಿತನ ಬಂಧನ 

satyadarshana

ವಿಧಾನ ಪರಿಷತ್ ಚುನಾವಣೆಯಲ್ಲಿʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.ಎಚ್‌ಡಿಕೆ

satyadarshana

Leave a Comment