Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗಣೇಶ ಹಬ್ಬ:ಯಲಬುರ್ಗಾ, ಬೇವೂರ, ಕುಕನೂರಲ್ಲಿ ಮದ್ಯೆ ಮಾರಾಟ ನಿಷೇಧಿಸಿ ಆದೇಶ


ಕೊಪ್ಪಳ : ಸೆಪ್ಟೆಂಬರ್ 21: ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಕಾಪಾಡಲು ಯಲಬುರ್ಗಾ, ಬೇವೂರ ಮತ್ತು ಕುಕನೂರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 24ರಂದು ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಗೌರಿ ಗಣೇಶ ಮೂರ್ತಿಗಳನ್ನು 1, 2, 3, 5, 7, 9, 11ನೇ ದಿನಗಳಂದು ಮೆರವಣಿಗೆಯಲ್ಲಿ ಸಾಗಿ ವಿಸರ್ಜನೆ ಮಾಡಲಾಗುತ್ತದೆ. ಹಬ್ಬದ ಆಚರಣೆ ಸಮಯದಲ್ಲಿ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕೆಲವು ದುಷ್ಟ ಶಕ್ತಿಗಳು ಕೋಮು ಸಾಮರಸ್ಯಕ್ಕೆ ಧಕ್ಕೆಯನ್ನುಂಟು ಮಾಡುವ ಸಾಧ್ಯತೆಗಳು ಇದ್ದು, ಆದ್ದರಿಂದ ಹಬ್ಬದ ಆಚರಣೆ ಸಮಯದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಲಬುರ್ಗಾ, ಬೇವೂರ ಮತ್ತು ಕೂಕ‌ನೂರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 22ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ (5ನೇ ದಿನ ವಿಸರ್ಜನೆ)., ಅದೇ ರೀತಿ ಸೆಪ್ಟೆಂಬರ್ 24ರ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ (7ನೇ ದಿನ ವಿಸರ್ಜನೆ) ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅಬಕಾರಿ ಉಪ ಆಯುಕ್ತರ ನೇತೃತ್ವದ ತನಿಖಾ ತಂಡ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ಆದೇಶವನ್ನು ಜಾರಿ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Related posts

ವಿದ್ಯಾರ್ಥಿ ಚೇತನ ಜೀವನ ಶೈಲಿ ಪಾಠ ವಿಶೇಷ ಹಾಗೂ ವಿನೂತನ ಕಾರ್ಯಕ್ರಮ.

satyadarshana

ಗಜೇಂದ್ರಗಡ ತಾಲೂಕ ಕುರಬರ ಸಂಘದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಅಂದಪ್ಪ ಬಿಚ್ಚೂರ, ಕಾರ್ಯದರ್ಶಿಯಾಗಿ ಕೆ.ಎಸ್.ಕೊಡತಗೇರಿ ನೇಮಕ

satyadarshana

ಸತ್ಯದರ್ಶನ ಕನ್ನಡ ದಿನಪತ್ರಿಕೆ. 11 04.2023

satyadarshana

Leave a Comment