Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಗದಗ : ಜನೆವರಿ 16: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2022 ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2022 ರ ಜನೆವರಿ 01 ರಿಂದ 2022 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು.ಕೃತಿಯಲ್ಲಿ ಪ್ರಥಮ ಮುದ್ರಣ 2022 ಎಂದು ಮುದ್ರಿತವಾಗಿರಬೇಕು.

ಮರುಮುದ್ರಣವಾದ ಪುಸ್ತಕಗಳು, ಪಿ.ಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿಗಾಗಿ ಪುರಸ್ಕøತ ಸಾಹಿತಿಗಳ ಕೃತಿಗಳು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು ಹಾಗೂ ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಮುಂದಿನ ಮೂರು ವರ್ಷದವರಗೆ ಪರಿಗಣಿಸುವುದಿಲ್ಲ.

ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿರುತ್ತದೆ.

ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್ , ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆ.ಸಿ. ರಸ್ತೆ , ಬೆಂಗಳೂರು- 560 002 ಇವರಿಗೆ ರಿಜಿಸ್ಟರ್ಡ ಅಂಚೆ/ ಕೋರಿಯರ್ ಮೂಲಕ ಅಥವಾ ಖುದ್ದಾಗಿ ಫೆಬ್ರುವರಿ 20 ರೊಳಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ದೂರವಾಣಿ ಸಂಖ್ಯೆ 080-22211730/ 22106460 ಸಂಪರ್ಕಿಸಬಹುದಾಗಿದೆ.

Related posts

ಕೋಟೆ ನಾಡಿನ ಹಿರಿಯ ಪತ್ರಕರ್ತ ಪಾಂಡುರಂಗ ಶಿಲುವೇರಿ ನೆನಪು ಮಾತ್ರ.

satyadarshana

ಸರ್ವರಿಗೂ ಸಮಾನವಾಗಿ ಅನ್ವಯವಾಗುವ ಹಕ್ಕುಗಳೆ ಮಾನವ ಹಕ್ಕುಗಳು .ಗುಗಲೊತ್ತರ್

satyadarshana

ರಾಷ್ಟ್ರೀಯ ಏಕತಾ ದಿವಸ: ಪ್ರತಿಜ್ಞಾ ವಿಧಿ ಸ್ವೀಕಾರ

satyadarshana

Leave a Comment