Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ನಗರ ಮತ್ತು ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡಿ: ಪಿ.ಐ.ವಿದ್ಯಾ

ಕೊಪ್ಪಳ :ಫೆಬ್ರವರಿ 03 : ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಮಹಿಳಾ ಸಬಲೀಕರಣಕ್ಕೆ ಹಾಗೂ ಜೀವನೋಪಾಯ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ರಾಷ್ಟಿçÃಯ ಜೀವನೋಪಾಯ ಅಭಿಯಾನದ ನಿರ್ದೇಶಕರಾದ ಪಿ.ಐ.ವಿದ್ಯಾ ಅವರು ಹೇಳಿದರು.

ಶುಕ್ರವಾರದಂದು ಜಿಲ್ಲಾ ಪಂಚಾಯತ್‌ನ ಜೆ.ಹೆಚ್. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲೆಯ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಹಾಗೂ ಸಂಜೀವಿನಿ-ಎನ್‌ಆರ್‌ಎಲ್‌ಎಮ್ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಮಹಿಳಾ ಸಬಲೀಕರಣಕ್ಕೆ ಹಾಗೂ ಜೀವನೋಪಾಯ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಉಪಕಾರ್ಯದರ್ಶಿಗಳು, ಯೋಜನಾಧಿಕಾರಿಗಳು, ರಾಷ್ಟಿçÃಯ ಜೀವನೋಪಾಯ ಅಭಿಯಾನ ಬೆಂಗಳೂರು, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಯೋಜನಾ ನಿರ್ದೇಶಕರು, ಜಿಲ್ಲೆಯ ಎಲ್ಲಾ ತಾಲೂಕಿನ ಕಾರ್ಯನಿರ್ವಾಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು/ಮುಖ್ಯಾಧಿಕಾರಿಗಳು ಮತ್ತು ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಭಿಯಾನ ವ್ಯವಸ್ಥಾಪಕರು, ಸಮುದಾಯ ಸಂಘಟನಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೆ ಭೇಟಿ:

ಸಭೆಯ ನಂತರ ರಾಷ್ಟಿçÃಯ ಜೀವನೋಪಾಯ ಅಭಿಯಾನದ ನಿರ್ದೇಶಕರಾದ ಪಿ.ಐ.ವಿದ್ಯಾ ಅವರು ಗವಿಮಠ ಆವರಣದಲ್ಲಿ ಅಸ್ಮಿತೆ, ಸ್ವಾವಲಂಬಿ ಬದುಕು, ಸಮೃದ್ಧಿ ಬದುಕು ಮತ್ತು ಸಂತೋಷದ ಬದುಕು ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾದ ಸ್ವ-ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಮಳಿಗೆಗಳಿಗೆ ಭೇಟಿ ನೀಡಿ, ಸ್ವ ಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳನ್ನು ವೀಕ್ಷಿಸಿ, ಮಾಹಿತಿಯನ್ನು ಪಡೆದು ಪ್ರಶಂಸೆಯನ್ನು ವ್ಯಕ್ತಪಡಿಸಿದರು.

ಮೇಳದಲ್ಲಿ ಸ್ವ ಸಹಾಯ ಸಂಘದಿAದ ತಯಾರಿಸಲ್ಪಟ್ಟ ಹಾಗೂ ಸ್ವಯಂ ಉದ್ಯೋಗದಲ್ಲಿ ಯಶಸ್ಸು ಕಂಡಿರುವ ಸ್ವಯಂ ಉದ್ಯೋಗಿಗಳಿಂದ ತಯಾರಿಸಲ್ಪಟ್ಟ ಆಹಾರ ಉತ್ಪನ್ನಗಳು, ಗೃಹಲಂಕಾರಿಕ ವಸ್ತುಗಳು, ಕೈಮಗ್ಗ, ಸೀರೆ ಮತ್ತು ಜವಳಿ ವಸ್ತುಗಳು, ಬಾಳೆ ನಾರಿನ ಉತ್ಪನ್ನಗಳು, ಚೆನ್ನಪಟ್ಟಣದ ಗೊಂಬೆಗಳು, ಬಿದಿರಿನ ಉತ್ಪನ್ನಗಳು, ಗೃಹಬಳಕೆ ವಸ್ತುಗಳಿಗೆ ಸಂಬAಧಿಸಿದAತೆ ಕೊಪ್ಪಳ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಿಂದ ಹಾಗೂ ರಾಯಚೂರು, ಬಳ್ಳಾರಿ, ಗದಗ, ವಿಜಯಪುರ, ಹಾವೇರಿ, ದಾವಣಗೆರೆ, ರಾಮನಗರ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ಚಿತ್ರದುರ್ಗ, ಬೆಳಗಾವಿ, ಜಿಲ್ಲೆಗಳು ಒಳಗೊಂಡAತೆ ಸುಮಾರು 100 ಮಳಿಗೆಗಳನ್ನು ತೆರೆಯಲಾಗಿರುತ್ತದೆ.

Related posts

ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಯುದ್ದದ ಪರಿಸ್ಥಿತಿಯನ್ನು ಜನರು ಹೇಗೆ ಎದುರಿಸಬೇಕು ಎಂದು ಜಾಗೃತಿ ಮೂಡಿಸುವುದಾಕ್ಕಾಗಿ ಅಣುಕು ಪ್ರದರ್ಶನ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್

satyadarshana

ಗದಗ – ಉಪತಶೀಲ್ದಾರ್ ಅಣ್ಣಿಗೇರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ.

satyadarshana

satyadarshana

Leave a Comment