Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ

ಗದಗ :ಫೆಬ್ರುವರಿ 7. ಮಾರ್ಚ 3 ರಿಂದ 6 ರವರೆಗೆ ನಾಲ್ಕು ದಿವಸಗಳ ಕಾಲ ಪಲ್ಸ ಪೊಲಿಯೋ ಕಾರ್ಯಕ್ರಮವು ಜಿಲ್ಲಾದ್ಯಂತ ಜರುಗಲಿದೆ. ಐದು ವರ್ಷದೊಳಗಿನ ಯಾವುದೇ ಮಗು ಪೊಲಿಯೋ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಲ್ಸ್ ಪೊಲಿಯೋ ಕಾರ್ಯಕ್ರಮ ಕಟ್ಟುನಿಟ್ಟಾಗಿ ವ್ಯವಸ್ಥಿತವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರದಂದು ರಾಷ್ಟ್ರೀಯ ಪಲ್ಸ್ ಪೊಲಿಯೋ ಅನುಷ್ಟಾನ ಕುರಿತು ಟಾಸ್ಕ್ ಫೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ತಾಲೂಕಾ ಮಟ್ಟದಲ್ಲಿ ಕಬ್ಬು ಕಟಾವು ಗ್ಯಾಂಗ್, ಇಟ್ಟಿಗೆ ಭಟ್ಟಿ, ನಗರ ಮತ್ತು ಅರೆ ನಗರ ಪ್ರದೇಶಗಳಲ್ಲಿನ ಮಕ್ಕಳ ಸಂಖ್ಯೆ ಹೆಚ್ಚಾಗಿರುವುದರಿಂದ ಎಲ್ಲಾ ಪ್ರದೇಶಗಳನ್ನು ಸಮೀಕ್ಷೆ ಮಾಡಿ ಸೂಕ್ಷ್ಮ ಕ್ರಿಯಾ ಯೋಜನೆ ತಯಾರಿಸಲು ಎಲ್ಲಾ ತಾಲೂಕಾ ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಹಾಗೂ ಇತರೆ ಹೈರಿಸ್ಕ ಏರಿಯಾವನ್ನು ಕಡ್ಡಾಯವಾಗಿ ಭೇಟಿ ನೀಡಿ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಲ್ಸ ಪೋಲಿಯೋ ಕಾರ್ಯಕ್ರಮ 3 ಹಂತದಲ್ಲಿ ಕಟ್ಟುನಿಟ್ಟಾಗಿ ನಡೆಸಲು ಮತ್ತು ಹೈರಿಸ್ಕ್ ಪ್ರದೇಶದಲ್ಲಿ ಅತೀ ಜಾಗರೂಕತೆಯಿಂದ ಪಾಲಕರನ್ನು ಮನವೊಲಿಸಿ ಲಸಿಕೆಯನ್ನು ನೀಡಲು ಸೂಚಿಸಿದರು. ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ಮೇಲ್ವಿಚಾರಕರು ಕಡ್ಡಾಯವಾಗಿ ಅಂತಹ ಕ್ಷೇತ್ರಗಳಿಗೆ ಭೇಟಿ ಮಾಡಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಡಾ. ಮುಕುಂದ ಗಲಗಲಿ ಇವರು ಮಾತನಾಡಿ ಪೋಲಿಯೋ ನಿರ್ಮೂಲನೆಯಲ್ಲಿ ನಮ್ಮ ಭಾರತ ದೇಶವು ಗಣನೀಯ ಪ್ರಗತಿಯನ್ನು ಸಾಧಿಸಿದ್ದು ಜನೆವರಿ 2011ರಿಂದ ಯಾವುದೇ ಹೊಸ ಪೋಲಿಯೋ ಪ್ರಕರಣ ಕಂಡು ಬಂದಿರುವದಿಲ್ಲ ಹಾಗೂ ಭಾರತ ದೇಶವು ಈಗ ವಿಶ್ವ ಆರೋಗ್ಯ ಸಂಸ್ಥೆವತಿಯಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂಬ ಪೋಲಿಯೋ ನಿರ್ಮೂಲನೆಯ ಪ್ರಮಾಣ ಪತ್ರವನ್ನು 2014 ರಲ್ಲಿಯೇ ಪಡೆದಿದೆ. 15 ಫೆಬ್ರುವರಿ 2016ಕ್ಕೆ ಕೇವಲ 2 ದೇಶಗಳಾದ ಪಾಕಿಸ್ತಾನ್, ಅಫ್ಘಾನಿಸ್ತಾನ್ ಮಾತ್ರ ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿವೆ ಈ ಹಿನ್ನೆಲೆಯಲ್ಲಿ ನಮ್ಮ ನೆರೆ-ಹೊರೆಯ ರಾಷ್ಟ್ರಗಳಾಗಿರುವುದರಿಂದ ವಲಸೆಯಿಂದ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ ಇರುವುದರಿಂದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಕೇವಲ ಒಂದೇ ಸುತ್ತಿನಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ಎ.ಎಫ್.ಪಿ. ಸರ್ವೇಕ್ಷಣೆ ಕಾರ್ಯಕ್ರಮಗಳನ್ನು ಅತ್ಯಂತ ಜಾಗರೂಕತೆಯಿಂದ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾಗುತ್ತದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ, ಆರ್.ಸಿ.ಹೆಚ್.ಓ ಡಾ.ಮೀನಾಕ್ಷಿ ಕೆ.ಎಸ್, ಜಿಲ್ಲೆಯ ಎಲ್ಲಾ ಅನುಷ್ಠಾನಾಧಿಕಾರಿಗಳು, ಸಮುದಾಯ ಔಷಧಿ ಅಧಿಕಾರಿ, ತಾಲೂಕಾ ವೈದ್ಯಾಧಿಕಾರಿಗಳು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related posts

ರಾಜ್ಯದ 40 ಕ್ಕೂ ಹೆಚ್ಚು ಕಡೆ ದಾಳಿ: ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ `ಲೋಕಾ’ ಶಾಕ್‌ :

satyadarshana

ಕಟಾವು ಮಾಡಿ ಕಣದಲ್ಲಿಟ್ಟು ಬೆಳೆ ಕಳೆದುಕೊಂಡವರಿಗೆ ನಷ್ಟ’ ಕೊಳೆತ ಬೆಳೆಗಳಿಗೆ ಸಿಗಲ್ಲ ಸರ್ಕಾರದ ಪರಿಹಾರ!

satyadarshana

ಪಡಿತರ ಅಕ್ಕಿ ಅಕ್ರಮ ಸಾಗಾಟ: ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು

satyadarshana

Leave a Comment