ಗದಗ: ಫೆಬ್ರುವರಿ 15: ಲಕ್ಷ್ಮೇಶ್ವರದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪುರಸಭೆ ಮುಖ್ಯಾಧಿಕಾರಿಗಳು, ತಹಶೀಲ್ದಾರರು ಹಾಗೂ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಶಿರಹಟ್ಟಿ ಇವರ ಅಧ್ಯಕ್ಷತೆಯಲ್ಲಿ ವಿವಿಧ ಸಂಘಟನೆಯ ಪದಾಧಿಕಾರಿಗಳು, ನಿಲಯ ಪಾಲಕರು, ಶಾಲಾ ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. 
ಚಿತ್ರಕಲಾ ಶಿಕ್ಷಕರ ಬಳಗದಿಂದ ಬಿಳಿಬಟ್ಟೆಯ ಮೇಲೆ ಚಿತ್ರಗಳನ್ನು ಪ್ರದರ್ಶಿಸಿದರು, ಹಾಗೂ ಪ್ರಮುಖ ಬೀದಿಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎತ್ತಿನಗಾಡಿಗಳ ಮೂಲಕ ಸಂಚಾರಮಾಡಿ, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಲಾಯಿತು.
ಸಂವಿಧಾನ ಪೀಠಿಕೆಯನ್ನು ಜನಸಾಮಾನ್ಯರಿಗೆ ಅರ್ಥೈಸಬೇಕು. ಈ ಮೂಲಕ ಜನಸಾಮಾನ್ಯರು ಸಹ ಸಂವಿಧಾನವನ್ನು ಅರಿತು ತಮ್ಮ ಹಕ್ಕು ಕರ್ತವ್ಯಗಳನ್ನು ಪಾಲಿಸಬೇಕು. ಸಂವಿಧಾನ ದತ್ತವಾಗಿ ಇರುವ ಹಕ್ಕುಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಜನ ಸಾಮಾನ್ಯರೆಲ್ಲರೂ ಒಂದು ಎಂಬ ಭ್ರಾತೃತ್ವ ಭಾವನೆ ಮೂಡಿಸುವ ಆಶಯವನ್ನು ಸಂವಿಧಾನ ಜಾಗೃತಿ ಕಾರ್ಯಕ್ರಮ ಒಳಗೊಂಡಿದೆ.
