ಗಜೇಂದ್ರಗಡ : ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಡಿಯಲ್ಲಿ ಲೋಕಸಭಾ ಚುನಾವಣಾ ಪ್ರಯುಕ್ತ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ದೇಶವೇ ತಲೆಬಾಗಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಮೋದಿ ಅವರನ್ನು ಮತ್ತೊಮ್ಮ ಪ್ರಧಾನಮಂತ್ರಿ ಅವರು ಬಿಜೆಪಿ ಚಿಹ್ನೆಗೆ ಮತ ನೀಡಿದರು.
ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ. ಮಾತನಾಡಿ, ಪ್ರಧಾನಿ ನರೇಂದ್ರಯವರ ಮೋದಿ ಸರ್ಕಾರದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆ ದೊರೆತಿವೆ. ಅವರ ಬದುಕನ್ನು ಹಸನಾಗಿಸುವ ಮತ್ತು ದೇಶದ ಅಭಿವೃದ್ಧಿಯ ಓಟವನ್ನು ಇನ್ನು ಹೆಚ್ಚಿನ ವೇಗದಲ್ಲಿ ಪಡೆಯುವಂತೆ ಕಳೆದ ಹತ್ತು ವರ್ಷಗಳಿಂದ ಮೋದಿಜೀಯವರು ಮಾಡುತ್ತಾ ಬಂದಿದ್ದಾರೆ ಎಂದು ಕೇಂದ್ರ ಸರ್ಕಾರದ ಸಾಧನೆಗಳನ್ನು ಪರಿಚಯಿಸಿದರು.
ಈ ಸಂದರ್ಭದಲ್ಲಿ ಜೆ.ಡಿ.ಎಸ್ ಬಂಡೆಪ್ಪ ಕಾಶಪ್ಪನವರ , ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಎಂ. ವೈ. ಸಾಗರ ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಉಭಯ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು.
