Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಹರಿವಿನ ಗ್ರಾಮಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಗದಗ : ಜುಲೈ 25: ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಪ್ರಥಮ ಸ್ಥಾನ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಕಟ್ಟೆಚ್ಚರ ವಹಿಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಗುರುವಾರ ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹದಿಂದ ತೊಂದರೆಗೀಡಾದ ನರಗುಂದ ಹಾಗೂ ರೋಣ ತಾಲೂಕಾ ಆಡಳಿತದೊಂದಿಗೆ ಪ್ರವಾಹ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2009 ಹಾಗೂ 2019 ರಲ್ಲಿ ಅಧಿಕ ಪ್ರಮಾಣದ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಆ ಸಂದರ್ಬದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅನೇಕ ಅಧಿಕಾರಿಗಳು ಅನುಭವ ಹೊಂದಿದ್ದಾರೆ. ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆಗೆ ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕೆಂದು ಸೂಚಿಸಿದರು.

ನವಿಲುತೀರ್ಥ ಡ್ಯಾಂ 37.731 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು ಪ್ರಸ್ತುತ 24 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಮಿನ ನೀರಿನ ಒಳಹರಿವು 26ಸಾವಿರ ಕ್ಯೂಸೆಕ್ಸ್ ಇದ್ದು ಶೀಘ್ರವೇ ನವಿಲುತೀರ್ಥ ಡ್ಯಾಮಿನಿನಿಂದ ನೀರು ಹೊರಬಿಡುವ ಸಾಧ್ಯತೆಯಿದೆ. ನವಿಲುತೀರ್ಥ ಡ್ಯಾಮಿನಿನಿಂದ ಅಪಾರ ಪ್ರಮಾಣದ ನೀರು ಬಿಟ್ಟಲ್ಲಿ ಮುಂದಿನ 18 ಗಂಟೆಯೊಳಗಾಗಿ ನೀರು ಜಿಲ್ಲೆಗೆ ಪ್ರವೇಶಿಸಲು ಡ್ಯಾಂನಿಆದ ನೀರು ಹೊರಬಿಡುವ ಮಾಹಿತಿಯು ತಕ್ಷಣವೇ ತಾಲೂಕಾ ಆಡಳಿತಗಳು ಪ್ರವಾಹ ಪೀಡಿತಕ್ಕೊಳಗಾಗುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸುವ ಮೂಲಕ ಜೀವ ಹಾನಿ ತಪ್ಪಿಸಬೇಕು.

ನವಲಗುಂದ ಸೇರಿದಂತೆ 5 ತಾಲೂಕುಗಳ ಮಳೆಯಿಂದ ಅಪಾರ ಪ್ರಮಾಣದ ನೀರು ಬೆಣ್ಣೆಹಳ್ಳ ತಲುಪಿ ಅಲ್ಲಿಂದ ಜಿಲ್ಲೆಗೆ ಒಮ್ಮಿಲೆ ನೀರು ಹರಿದು ಬರಲಿದೆ ನರಗುಂದ ಹಾಗೂ ರೋಣ ತಾಲೂಕಿನ ಹಲವು ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದ್ದು ತಾಲೂಕಾ ಆಡಳಿತ ಯಾವುದೇ ಗ್ರಾಮಗಳನ್ನು ಗುರುತಿಸಿದೆ. ನೀರಿನ ಪ್ರಮಾಣಕ್ಕನುಗುಣವಾಗಿ ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಬೇಕು ಎಂದು ನಿರ್ದೇಶಿಸಿದರು.

ಪ್ರವಾಹ ಪರಿಸ್ಥಿತಿ ತಲೆದೂರಿನಲ್ಲಿ ಅಗ್ನಿಶಾಮಕ ಇಲಾಖೆ ತಂಡ ತಕ್ಷಣ ಕಾರ್ಯಪ್ರವೃತ್ತವಾಗಬೇಕು. ತಾಲೂಕಾ ಆಡಳಿತದೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸುವ ಮೂಲಕ ಪ್ರವಾಹ ಪರಿಸ್ಥಿತಿ ನಿರ್ವಹಣೆ ಮಾಡಬೇಕು. ತಗ್ಗುಪ್ರದೇಶಗಳು ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಅವರು ನರಗುಂದ ಹಾಗೂ ರೋಣ ತಾಲೂಕುಗಳ ಪೊಲೀಸ ಅಧಿಕಾರಿಗಳು ಬೀಟ್ ಮಾಡುವ ಮೂಲಕ ಪ್ರವಾಹ ಕುರಿತಂತೆ ಮಾಹಿತಿ ಸಂಗ್ರಹ ಮಾಡಿಟ್ಟುಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಎದುರಾದಾಗ ಜನಸಾಮಾನ್ಯರು ನದಿ ಅಂಚಿನ ಕಡೆಗೆ ತೆರಳದಂತೆ ಬ್ಯಾರಿಕೇಡ್ ಹಾಕುವ ಮೂಲಕ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಯಾವುದೇ ಪ್ರಾಣಹಾನಿಗೆ ಅವಕಾಶ ನೀಡಬಾರದು ಎಂದರು.

ಜಿ.ಪಿ.ಎ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಮಾತನಾಡಿ ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಇರುವಂತೆ ಪರಿಶೀಲಿಸಬೇಕು. ಸಂದರ್ಭಾನುಸಾರ ಸಾರ್ವಜನಿಕರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವಲ್ಲಿ ಆರೋಗ್ಯಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಲು ಸೂಚಿಸಿದರು.

ನರಗುಂದ ಹಾಗೂ ರೋಣ ತಹಶೀಲ್ದಾರರಾದ ಶ್ರೀಶೈಲ ತಳವಾರ ಹಾಗೂ ನಾಗರಾಜ ಮಾತನಾಡಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಥಳೀಯ ಜೆಸಿಬಿ, ನುರಿತ ಈಜುಗಾರರು, ತರಕಾರಿ ಹಾಗೂ ಕಿರಾಣಿ ಅಂಗಡಿ ಆಸ್ಪತ್ರೆ ಹಾಗೂ ವೈದ್ಯರ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಜನಜಾನುವಾರು ಸ್ಥಳಾಂತರಕ್ಕೆ ಸ್ಥಳವನ್ನು ಗುರುತಿಸಲಾಗಿದೆ. ಮೊದಲು ಪ್ರವಾಹಕ್ಕೀಡಾಗುವ ಗ್ರಾಮಗಳ ಪಟ್ಟಿಯನ್ನು ಮಾಡಿಟ್ಟುಕೊಂಡಿದ್ದು ಸಂದರ್ಭಾನುಸಾರ ಸಮರ್ಪಕವಾಗಿ ಪ್ರವಾಹ ನಿರ್ವಹಣೆಗೆ ಕ್ರಮ ವಹಿಸಲಾಗಿದೆ.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಡಿಡಿಎಲ್‌ಆರ್ ರುದ್ರಗೌಡ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಅಗ್ನಿಶಾಮಕ ಇಲಾಖೆ ಅಧಿಕಾರಿ ವಿ.ಎಸ್. ಠಕ್ಕೇಕರ್, ವಿಪತ್ತು ನಿರ್ವಹಣಾ ಪರಿಣಿತ ಶಿವಾನಂದ ರಾಜನಾಳ ಸೇರಿದಂತೆ ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು.

Related posts

ಗದಗ ಅರಣ್ಯ ವಿಭಾಗದ ವತಿಯಿಂದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಪರಿಸರ ದಿನ ಆಚರಣೆ

satyadarshana

ಗಜೇಂದ್ರಗಡದಲ್ಲಿ ಸಂವಿಧಾನ ಜಾಗೃತಿ ಅಭಿಯಾನ ಸಾಮಾಜಿಕ ಬದಲಾವಣೆಗಳ ಹಿಂದೆ ಸಂವಿಧಾನದ ಪಾತ್ರ ಮಹತ್ವದ್ದು

satyadarshana

ರೋಣ ತಾಲೂಕ ಪಂಚಾಯತ ಆವರಣದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

satyadarshana