Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗದಗ ಜಿಲ್ಲೆಯ ನಂದಿಶ್ವರ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 256 ರ ನೂತನ ಅಂಗನವಾಡಿ ಕಟ್ಟಡದ ಭೂಮಿ ಪೂಜೆ

ಗದಗ: ಅಗಷ್ಟ 7: ಗದಗ ನಗರದ ನಂದಿಶ್ವರ ನಗರದಲ್ಲಿ ರವಿವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ 2024-25 ಸಾಲಿನ ವಿಶೇಷ ಅನುದಾನದಡಿಯಲ್ಲಿ ಅಂದಾಜು ರೂ20 ಲಕ್ಷ ಅನುದಾನದಲ್ಲಿ ನಿರ್ಮಿಸುವ ನಂದಿಶ್ವರ ನಗರದ ಸರ್ಕಾರಿ ಕಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ. 20 ರಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆ 256 ರ ನೂತನ ಅಂಗನವಾಡಿ ಕಟ್ಟಡ ನಿರ್ಮಾಣದ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದ್ಯಸರಾದ ಶ್ರೀಮತಿ ವಿದ್ಯಾವತಿ ಗಡಗಿ,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ ಎಲ್ ಬಾರಟಕ್ಕಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರು,ಸಿಡಿಪಿಒ ಹುಲಿಗೆವ್ವ ಜೋಗೆರ್,ಬಿ ಇ ಒ ಆರ್ ಎಸ್ ಬುರಡಿ ಕೆಆರ್ ಐ ಡಿ ಎಲ್ ಇಇ ಅನೀಲ್ ಪಾಟೀಲ,ಎಇಇ ಪಿ ಜೆ ಧಾರವಾಡ , ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

Related posts

ಶಾಸಕರ ಎದುರೇ ಕಾರ್ಯಕರ್ತನಿಗೆ ಕ್ಲಾಸ್ ತೆಗೆದುಕೊಂಡ ಗ್ರಾಮಸ್ಥರು.. 

satyadarshana

ತಿರುಳ್ಗನ್ನಡ ವೇದಿಕೆಯಲ್ಲಿ ಮನತಣಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು —

satyadarshana

ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆ

satyadarshana

Leave a Comment