Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಕ್ಕಳ ಜೊತೆಗೂಡಿ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಸರಳತೆ ಮೆರೆದ ಸಿಇಓ ಭರತ ಎಸ್

ರೋಣ : ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ರೋಣ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗೆ

ಭೇಟಿ ನೀಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಯಾವಗಲ್, ಬೆಳವಣಕಿ, ಮಲ್ಲಾಪೂರ, ಚಿಕ್ಕಮಣ್ಣೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ, ಬೂದು ನಿರ್ವಹಣೆ ಕಾಮಗಾರಿ, ಗ್ರಂಥಾಲಯ, ದನದ ಕೊಟ್ಟಿಗೆ, ವೈಯಕ್ತಿಕ ಶೌಚಾಲಯ, ಘನತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾಮಗಾರಿ ಕಡತಗಳು ಹಾಗೂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಅಳತೆಯ ಪ್ರಮಾಣವನ್ನು ಪರಿಶೀಲನೆ ನಡೆಸಿದರು.

ಯಾವಗಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದೀಡಿರ ಭೇಟಿ, ಪರಿಶೀಲನೆ..

ಯಾವಗಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಇಓ ಅವರು ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು, ರೆಜಿಸ್ಟರ್ ಚಕ್ ಮಾಡಿ ಮಾಹಿತಿ ಪಡೆದರು. ಸಪ್ಟೆಂಬರ್ ತಿಂಗಳಲ್ಲಿ ಎಷ್ಟು ಜನರು ಬ್ಲಡ್ ಚಕ್ ಮಾಡಿಸಲಾಗಿದೆ, ಅದರಲ್ಲಿ ಹೀಮೋಗ್ಲೋಬಿನ್ ಕೊರತೆ ಎಷ್ಟು ಮಕ್ಕಳಿಗೆ ಇದೆ ಎಂಬುದರ ಕುರಿತು ಮಾಹಿತಿ ಪಡೆದರು. ಆಸ್ಪತ್ರೆಯನ್ನು ಶುಚಿಯಾಗಿ ಇಡಲು ಸೂಚನೆ ನೀಡಿದ ಅವರು ಆಸ್ಪತ್ರೆಯನ್ನು ಸರಿಯಾದ ರೀತಿಯಲ್ಲಿ ಕೆಲಸ ಮಾಡಲು ಅಲ್ಲಿನ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇದುವರೆಗೂ ನಾರ್ಮಲ್ ಹೆರಿಗೆ ಆಗಿಲ್ಲಾ ನಾವು ಬೇರೆ ಊರಿಗೆ ಹೋಗಬೇಕಾಗುತ್ತದೆ ಎಂದು ಸಾರ್ವಜನಿಕರು ದೂರಿದರು. ಈ ಕುರಿತು ಸಿಬ್ಬಂದಿಗಳೊಂದಿಗೆ ಮಾಹಿತಿ ಪಡೆದ ಅವರು ಕೇಂದ್ರದಲ್ಲಿ ಸಹಜ ಹೆರಿಗೆಯನ್ನು ಮಾಡಲು ಸೂಚನೆ ನೀಡಿದರು. ಸಹಜ ಹೆರಿಗೆಗೆ ಬೆಬಿ ವಾರ್ಮ ಹಾಗೂ 7 ಟ್ರೇಸ್ ನೀಡಲು ತಾಲೂಕ ಅಧಿಕಾರಿಗೆ ಸೂಚನೆ ನೀಡಿದರು.

ಬಳಿಕ ಗ್ರಾಮದ ಗ್ರಂಥಾಲಯಕ್ಕೆ ಭೇಟಿ ಬೆಳವಣಕಿ ಹಾಗೂ ಯಾವಗಲ್ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣದ ಅಳತೆ ಹಾಗೂ ಗ್ರಾಮದಲ್ಲಿ ನಿರ್ಮಾಣವಾದ ಉದ್ಯಾನವನ ಬೂದು ನಿರ್ವಹಣೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು

ಬಿಸಿಯೂಟ ಸವಿದು ಗುಣಮಟ್ಟ ಪರಿಶೀಲಿಸಿದ ಜಿಪಂ ಸಿಇಓ

ರೋಣ ತಾಲೂಕಿನ ಮಲ್ಲಾಪೂರ ಗ್ರಾಮ ಪಂಚಾಯತಿಯ ಸರಕಾರಿ ಪ್ರೌಢ ಶಾಲೆಗೂ ಸಹ ದೀಡಿರ ಭೇಟಿ ನೀಡಿದ ಸಿಇಓ ಭರತ ಎಸ್ ಅವರು ಮಕ್ಕಳ ಜೊತೆಗೂಡಿ ಕೆಳಗೆ ಕುಳಿತು ಮಧ್ಯಾಹ್ನದ ಬಿಸಿಯೂಟ (ಫಲಾವು, ಚಕ್ಕಿ, ಮೊಟ್ಟೆ) ಸವಿದು ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಿದರು. ಉಟ ಮಾಡುತ್ತ ವಿದ್ಯಾರ್ಥಿ ಗಳೊಂದಿಗೆ ಕೆಲ ಹೊತ್ತು ಪ್ರಶ್ನೋತ್ತರ ನಡೆಸಿದ ಅವರು, ಮೂಲಭೂತ ಸೌಕರ್ಯ ಹಾಗೂ ಊಟದ ಗುಣಮಟ್ಟ ಹಾಗೂ ಇನ್ನಿತರ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಶಾಲೆಯಲ್ಲಿ ಬೋಧನಾ ಗುಣಮಟ್ಟ, ಶೌಚಾಲಯ, ಸ್ವಚ್ಛ ಕುಡಿಯುವ ನೀರಿನ ಸೌಲಭ್ಯ, ಅಡುಗೆ ಕೋಣೆಗಳಿಗೆ ಭೇಟಿ ನೀಡಿ ಸ್ವಚ್ಛತೆಯನ್ನು ಅವಲೋಕಿಸಿದರು.

ಮಲ್ಲಾಪೂರ ಶಾಲೆಗೆ ಅನಿರೀಕ್ಷಿತ ಭೇಟಿ, ಮಕ್ಕಳ ಜೊತೆಗೆ ಸಂವಾದ

ಮಲ್ಲಾಪೂರ ಗ್ರಾಮದ ವಿವಿಧ ಕಾಮಗಾರಿಗಳ ವೀಕ್ಷಣೆ ಬಳಿಕ ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿ ಕುಳಿತ ಮಕ್ಕಳ ಸಂಖ್ಯೆ ಬಗ್ಗೆ ಮಾಹಿತಿ ಪಡೆದರು ಮಕ್ಕಳ ಸಂಖ್ಯೆ ಕಡಿಮೆ ಆಗಲು ಕಾರಣವನ್ನು ಮಕ್ಕಳಿಂದ ಪಡೆದರು. ಮಕ್ಕಳಿಗೆ ತಮ್ಮ ಪರಿಚಯ ಮಾಡಿಕೊಂಡು ಪ್ರತ್ಯೇಕವಾಗಿ 15 ನಿಮಿಷಗಳ ಕಾಲ ಶಾಲಾ ಕೊಠಡಿಯಲ್ಲಿ ಮಕ್ಕಳೊಂದಿಗೆ ಸಂವಾದ ಮಾಡಿದರು.

ಈ ಸಂದರ್ಭದಲ್ಲಿ ರೋಣ ತಾಲೂಕ ಪಂಚಾಯತಿಯ ಕಾರ್ಯ ನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ, ಸಹಾಯಕ ನಿರ್ದೇಶಕರಾದ ( ಗ್ರಾ ಉ) ಚಂದ್ರಶೇಖರ ಬಿ ಕಂದಕೂರ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯತಿ ಚುನಾಯಿತ ಜನಪ್ರತಿನಿಧಿಗಳು, ವಿವಿಧ ತಾಲೂಕ ಮಟ್ಟದ ಅಧಿಕಾರಿಗಳು, TC, TIEC, TA, BFT ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

 

Related posts

ಶಾಲೆಗೆ ಕುಡಿದು ಬರುತ್ತಿದ್ದ ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಿದ ಗ್ರಾಮಸ್ಥರು

satyadarshana

ಪೋಲಿಸ ಇಲಾಖೆ ದೂರುವ ಮುನ್ನ ಆತ್ಮಾವಲೋಕನ ಮಾಡಿಕೊಳ್ಳಿ : ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ಗೋಪಾಲ ಕೋಣಿಮನಿ

satyadarshana

ಮಹಿಳೆಯರು ಕ್ರೀಯಾಶೀಲ ಗುಣಗಳನ್ನು ಬೆಳೆಸಿಕೊಳ್ಳಿ : ಡಾ. ಜ್ಯೋತಿ

satyadarshana

Leave a Comment