Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳಿಸಿ ಸಾಮಾನ್ಯ ಸಭೆ ನಡೆಸಿದ ಪಿಡಿಓ!

ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳಿಸಿ ಸಾಮಾನ್ಯ ಸಭೆ ನಡೆಸಿದ ಪಿಡಿಓ!

ಗಜೇಂದ್ರಗಡ: ತಾಲೂಕಿನ ಸೂಡಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಪಿಡಿಓ ಅಶೋಕ ಕಂಬಿ ಕಾನೂನಿ ಪಾಠ ಹೇಳಿ ಸಭೆಯಿಂದ ಹೊರಗೆ ಕಳಿಸಿದ ಬಳಿಕ ಸಭೆ ನಡೆಸಿದರು.

ಸಾಮಾನ್ಯ ಸಭೆಯಿರುವ ಕುರಿತು ಗ್ರಾಮಸ್ಥರು ಮಾಧ್ಯಮ ಪ್ರತಿನಿಧಿಗಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸಾಮಾನ್ಯ ಸಭೆಯ ವರದಿ ಮಾಡಲು ತೆರಳಿದ್ದರು. ಆದರೆ ಸಭೆ ಆರಂಭಕ್ಕೂ ಮೊದಲು ಕಂಪ್ಯೂಟರ್‌ ಆಪರೇಟರ್‌ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಸ್ವಾಗತ ಕೊರಿದರು. ಬಳಿಕ ಪಿಡಿಓ ಅಶೋಕ ಕಂಬಿ ನಿಮ್ಮನ್ನು ಸಭೆಗೆ ಆಹ್ವಾನಿಸಿಲ್ಲ. ಹೀಗಾಗಿ ಕಾನೂನಿನಲ್ಲಿ ನಿಮಗೆ ಸಭೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದರು.

ಕೆಲ ಸದಸ್ಯರ ಸಲಹೆಯಂತೆ ಮೇಲಾಧಿಕಾರಿಗಳಿಗೆ ಕರೆ ಮಾಡಿ ಈ ಕುರಿತು ಮಾಹಿತಿ ಪಡೆದು ಸಭೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಲು ಅಧ್ಯಕ್ಷರ ಪರವಾನಗಿ ನೀಡಿದರೆ ಮಾತ್ರ ಕಾನೂನಿನಲ್ಲಿ ಅವಕಾಶವಿದೆ ಎಂದರು.

ಬಳಿಕ ಅಧ್ಯಕ್ಷೆ ಖಾದರಬಿ ಮುಜಾವರ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಸಭೆಯಲ್ಲಿ ಭಾಗವಹಿಸಲು ನಾನು ಅವಕಾಶ ಕೊಡುವುದಿಲ್ಲ. ಸಭೆ ಬಳಿಕ ವರದಿ ನೀಡುತ್ತೇವೆ ಎಂದರು. ಹೀಗಾಗಿ ಮಾಧ್ಯಮ ಪ್ರತಿನಿಧಿಗಳು ಸಭೆಯಿಂದ ಹೊರ ನಡೆದರು.

ಪುರಸಭೆ, ಪಟ್ಟಣ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಗಳಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ

Related posts

ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ

satyadarshana

ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ : ಜಿಲ್ಲಾ ನ್ಯಾ. ಬಸವರಾಜ

satyadarshana

ಗಜೇಂದ್ರಗಡ ತಾಲೂಕಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ.

satyadarshana

Leave a Comment