Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ದುಡಿಯೋಣ ಬಾ’ ಅಭಿಯಾನ ಯಶಸ್ವಿಗೆ ಆದ್ಯತೆ

ಶಿರಹಟ್ಟಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ಒದಗಿಸುವ ಉದ್ದೇಶದಿಂದ *‘ದುಡಿಯೋಣ ಬಾ’* ಅಭಿಯಾನವನ್ನು ಆದ್ಯತೆ ಮೇರೆಗೆ ಹಮ್ಮಿಕೊಳ್ಳಲಾಗಿದೆ.

ಮೇ 01, 20255 ರಿಂದ ಆರಂಭವಾಗುವ ‘ದುಡಿಯೋಣ ಬಾ’ ಅಭಿಯಾನ ಜೂನ್ ಅಂತ್ಯದವರೆಗೆ ನಡೆಯಲಿದೆ ಎಂದು ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ರಾಮಣ್ಣ ದೊಡ್ಡಮನಿ ತಿಳಿಸಿದರು.

ಇದುವರೆಗೆ ನರೇಗಾ ಯೋಜನೆಯಡಿ ಒಳಗೊಳ್ಳದೆ ಇರುವ ಕುಟುಂಬಗಳನ್ನು ಸಮೀಕ್ಷೆ ಮಾಡಿ ಅರ್ಹರಿಗೆ ಉದ್ಯೋಗ ಚೀಟಿ ವಿತರಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಯೋಜನೆಯ ಕುರಿತು ಅರಿವು ಮೂಡಿಸಿ, ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು, ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಗುರುತಿಸಿ, ಯೋಜನೆಯ ಸೌಲಭ್ಯಗಳನ್ನು ದೊರಕಿಸಿ ಕೊಡಲು ಒತ್ತು ನೀಡಲಾಗಿದೆ ಎಂದರು.

ಯೋಜನೆಯಡಿ ಗ್ರಾಮೀಣ ಜನರಿಗೆ ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು ಮತ್ತು ಸ್ವಾವಲಂಬಿಗಳಾಗಿ ಬದುಕುವಂತೆ ಮಾಡುವುದು ಅಭಿಯಾನದ ಉದ್ದೇಶವಾಗಿದೆ ಎನ್ನುತ್ತಾರೆ ಇಒ ರಾಮಣ್ಣ ದೊಡ್ಡಮನಿ. ಅರ್ಹ ಫಲಾನುಭವಿಗಳಿಗೆ ವೈಯಕ್ತಿಕ ಆಸ್ತಿಗಳನ್ನು ಸೃಜನೆ ಮಾಡುವ ಮೂಲಕ ಪರ್ಯಾಯ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು, ಅಂಗವಿಕಲರು, ಮಹಿಳೆಯರು, ಹಿರಿಯ ನಾಗರಿಕರು, ಮಂಗಳ ಮುಖಿಯರು ಸೇರಿದಂತೆ ದುರ್ಬಲ ವರ್ಗಗಳಿಗೆ ಆದ್ಯತೆಯ ಮೇರೆಗೆ ಜಾಬ್ ಕಾರ್ಡ್‌ ಮತ್ತು ಕೆಲಸ ಒದಗಿಸುವುದು ಸಹ ಅಭಿಯಾನದ ಭಾಗವಾಗಿದೆ ಎಂದು ಹೇಳಿದರು.

ಮಹಿಳಾ ಭಾಗವಹಿಸುವಿಕೆ: ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಪುರುಷ ಮತ್ತು ಮಹಿಳೆಯರಿಗೆ ಕೂಲಿ ದರದಲ್ಲಿ ವ್ಯತ್ಯಾಸ ಇರುವುದನ್ನು ಕಾಣಬಹುದು ಮತ್ತು ಕೆಲಸದ ಸಮಯ ಕೂಡ ಅಧಿಕವಾಗಿರುತ್ತದೆ. ನರೇಗಾ ಯೋಜನೆಯಡಿ ಪುರುಷ ಮತ್ತು ಮಹಿಳೆಯವರಿಗೆ ಸಮಾನ ಕೂಲಿ ಹಾಗೂ ನಿಗದಿತ ಕೆಲಸದ ಪ್ರಮಾಣ ಇರುತ್ತದೆ. ಈ ಅಂಶಗಳನ್ನು ಗ್ರಾಮೀಣ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ ಮನವರಿಕೆ ಮಾಡುವ ಮೂಲಕ ನರೇಗಾ ಯೋಜನೆಯಲ್ಲಿ ಪಾಲ್ಗೊಳ್ಳಲು ಉತ್ತೇಜಿಸಲಾಗುವುದು, ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರನ್ನು ಒಳಗೊಂಡು ಕಾಯಕ ಸಂಘಗಳನ್ನು ರಚನೆ ಮಾಡುವುದು ಮತ್ತು ಮಹಿಳಾ ಕಾಯಕ ಬಂಧುಗಳನ್ನು ನೇಮಿಸಿಕೊಂಡು 2025-26ನೇ ಸಾಲಿನಲ್ಲಿ ತಾಲೂಕಿನಲ್ಲಿ ಮಹಿಳಾ ಭಾಗವಹಿಸುವಿಕೆ ಪ್ರಮಾಣವನ್ನು ಶೇ 60 ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಉದ್ಯೋಗ ಚೀಟಿ ಪಡೆಯುವ ವಿಧಾನ: 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಗ್ರಾಮ ಪಂಚಾಯಿತಿಗೆ ನಮೂನೆ-1 ರಲ್ಲಿ ಅರ್ಜಿ ಸಲ್ಲಿಸಬಹುದು, ಅರ್ಜಿಯ ಜೊತೆಗೆ ಪಾಸ್ ಪೋರ್ಟ್‌ ಅಳತೆಯ ಫೋಟೊ, ಆಧಾರ್‌ ಕಾರ್ಡ್‌, ರೇಷನ್ ಕಾರ್ಡ್‌, ಬ್ಯಾಂಕ್‌ ಖಾತೆಯ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.

Related posts

ಮತದಾರರ ಚೀಟಿಯೊಂದಿಗೆ ಆಧಾರ ಸಂಖ್ಯೆ ಜೋಡಣೆ ಹಾಗೂ ಮತದಾರರ ನೊಂದಣಿ ಕಾರ್ಯದಲ್ಲಿ ಪ್ರಗತಿ ಸಾಧಿಸಲು ಸೂಚನೆ. ಡಾ.ಸುಶೀಲಾ ಬಿ .

satyadarshana

ಕಲಬುರಗಿ: ಮೇಯರ್​ ಪಟ್ಟಕ್ಕಾಗಿ ಜೆಡಿಎಸ್​ನದ್ದು ಕಾದು ನೋಡುವ ತಂತ್ರ

satyadarshana

ಅಟಲ್ ಭೂ ಯೋಜನೆ : ಅನುಷ್ಟಾನ ಹಾಗೂ ಮೇಲ್ವಿಚಾರಣೆ ಸಭೆ

satyadarshana

Leave a Comment