Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಾಗರೂಕತೆಯಿಂದ ಸಮೀಕ್ಷೆ ಕೈಗೊಳ್ಳಿ – ಜಿಲ್ಲಾಧಿಕಾರಿ ನಲಿನ್ ಅತುಲ್

ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ: ಗಣತಿದಾರರು ಹಾಗೂ ಮೇಲ್ವಿಚಾರಕರುಗಳಿಗೆ ತರಬೇತಿ

ಕೊಪ್ಪಳ: ಮೇ 03: ಪರಿಶಿಷ್ಟ ಜಾತಿ ಮಿಸಲಾತಿ ವರ್ಗೀಕರಣ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ರೀತಿ ಲೋಪವಾಗದಂತೆ ಜಾಗರೂಕತೆಯಿಂದ ಸಮೀಕ್ಷೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಅವರು ಶನಿವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಸಮೀಕ್ಷೆಗಾಗಿ ಗಣತಿದಾರರು ಹಾಗೂ ಮೇಲ್ವಿಚಾರಕರುಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಮೀಸಲಾತಿ ಕೊಡಲು ಸೂಕ್ತ ಮಾಹಿತಿ ಇರಬೇಕು. ಈ ಹಿನ್ನೆಲೆಯಲ್ಲಿ ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಎಸ್.ಸಿ.ಯಲ್ಲಿ ಬರುವ 101 ಜಾತಿಗಳಲ್ಲಿ ಯಾವ ಒಂದು ಜಾತಿಗೆ ಅತೀ ಹೆಚ್ಚು ಮೀಸಲಾತಿ ಸಿಕ್ಕಿದೆ ಮತ್ತು ಯಾವ ಜಾತಿಗೆ ಕನಿಷ್ಠ ಮೀಸಲಾತಿಯು ಸಹ ದೊರಕಿಲ್ಲ ಎನ್ನುವುದನ್ನ ಸ್ಪಷ್ಟವಾಗಿ ತಿಳಿದುಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದರು.

ಸಮೀಕ್ಷೆ ಕೈಗೊಳ್ಳುವ ಗಣತಿದಾರರು ಹಾಗೂ ಮೇಲ್ವಿಚಾರಕರುಗಳು ಸಮೀಕ್ಷೆಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಅರ್ಥ ಮಾಡಿಕೊಳ್ಳಬೇಕು. ಮನೆ-ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ನಿಮಗೆ ನೀಡಿರು 42 ಪ್ರಶ್ನೆಗಳನ್ನು ಕೇಳಬೇಕು. ನಂತರ ಮಾಹಿತಿಯನ್ನು ಕೃಡಿಕರಿಸಬೇಕು. ಈ ಸಮೀಕ್ಷೆಯಲ್ಲಿ ಯಾವುದೇ ತೋಂದರೆ ಆಗಬಾರದೆಂಬ ಉದ್ದೇಶದಿಂದ ಒಂದು ಮೊಬೈಲ್ ಆ್ಯಪ್ ಅಪ್ಲಿಕೇಶನ್ ನೀಡಿದ್ದು, ಅದರಲ್ಲಿ ಎಲ್ಲಾ ಪ್ರಶ್ನೆಗಳನ್ನು ನೀಡಲಾಗಿರುತ್ತದೆ. ಆ್ಯಪ್‌ನಲ್ಲಿನ ಜಾತಿ ಹೆಸರು ಆಂಗ್ಲ ಭಾಷೆಯಲ್ಲಿರುತ್ತದೆ. ಅದಕ್ಕಾಗಿ ತರಬೇತಿ ಬಹಳ ಮುಖ್ಯವಾಗಿದೆ. ಗಣತಿದಾರರು ಹಾಗೂ ಮೇಲ್ವಿಚಾರಕರುಗಳು ಈ ಕಾರ್ಯಾಗಾರದಿಂದ ಹೆಚ್ಚಿನ ವಿಷಯಗಳನ್ನು ತಿಳಿದು, ಯಾವುದೇ ರೀತಿ ಲೋಪವಾಗದಂತೆ ಜಾಗರೂಕತೆಯಿಂದ ಸಮೀಕ್ಷೆಯನ್ನು ನೆಡಸಬೇಕು. ಸಮೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿಯಿದ್ದು, ಯಾವುದೇ ಸಮಸ್ಯೆ ಇದ್ದಲ್ಲಿ ಸಹಾಯವಾಣಿಗೆ ಅಥವಾ ಮಾಸ್ಟರ್ ಟ್ರೆöÊನರ್‌ಗಳನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಮಾತನಾಡಿ, ಪರಿಶಿಷ್ಟ ಜಾತಿ ಮಿಸಲಾತಿ ವರ್ಗೀಕರಣ ಸಮೀಕ್ಷೆಗಾಗಿ ಮತಗಟ್ಟೆ ಪ್ರದೇಶದವಾರು ಪಟ್ಟಿ ಬಿಡುಗಡೆ ಮಾಡಲಾಗುವುದು. ಅದರಂತೆ ಮತಗಟ್ಟೆಯ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮಾಡಬೇಕು. ಕೇವಲ ಎಸ್ಸಿ ಜನಾಂಗವಲ್ಲದೆ ಎಲ್ಲಾ ವರ್ಗದ ಜನರ ಸಮೀಕ್ಷೆಯನ್ನು ಕೈಗೊಳ್ಳಬೇಕು. ಈ ಸಮೀಕ್ಷೆಯು ಮೋಬೈಲ್ ಆ್ಯಪ್ ಮೂಲಕವೇ ಮಾಡಬೇಕಾಗಿದ್ದು, ಮ್ಯಾನುವಲ್ ಮೂಲಕ ಸಮೀಕ್ಷೆಗೆ ಅವಕಾಶವಿರುವುದಿಲ್ಲ. ಆ್ಯಂಡ್ರಾಯ್ಡ್ ಮೋಬೈಲ್ 8.0 ವರ್ಶನ್‌ನಲ್ಲೆ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಮಾಡಲು ಅವಕಾಶವಿದೆ. ಸಮೀಕ್ಷಾ ಸಮಯದಲ್ಲಿ ನಿಮ್ಮ ನಿಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಕುಟುಂಬದವರ ಮನೆ ಮನೆಗೆ ಹೋಗಿ ಖುದ್ದಾಗಿ ಮಾಹಿತಿಯನ್ನ ಪಡೆದುಕೊಂಡು, ಮಾಹಿತಿ ಕೊಡುವಂತಹ ವ್ಯಕ್ತಿಯ ಫೋಟೋವನ್ನು ಜಿ.ಪಿ.ಎಸ್ ಮಾದರಿ ತೆಗೆದು ಅಪ್‌ಲೋಡ್ ಮಾಡಬೇಕು. ಕುಟುಂಬದ ಮುಖ್ಯಸ್ಥರು ನೀಡುವ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು. ಸಮೀಕ್ಷೆದಾರರು ಮನೆ ಮನೆ ಬೇಟಿ ನೀಡಿ ಸಮೀಕ್ಷೆಯನ್ನು ಮೇ 5 ರಿಂದ ಮೇ 17ರ ವರೆಗೆ ಬೆಳಗ್ಗೆ 8 ರಿಂದ ಸಾಯಂಕಾಲ 6.30 ರವರೆಗೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಯನ್ನು ಕೈಗೊಳ್ಳಬೇಕು. ಸಮೀಕ್ಷೆ ಬ್ಲಾಕಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ ಮನೆ ಭೇಟಿ ಅವಧಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಮೇ 19 ರಿಂದ ಮೇ 21ರ ವರೆಗೆ ಸಂಗ್ರಹಿಸಬೇಕು. ಮೇ 19 ರಿಂದ ಮೇ 23ರ ವರೆಗೆ ಕಡ್ಡಾಯವಾಗಿ ಆಧಾರ್ ನಂಬರ್ ಹಾಗೂ ರೇಷನ ಕಾರ್ಡ್ ನಂಬರನೊಂದಿಗೆ ಸ್ವಯಂ ಘೋಷಣೆ (ಆನ್‌ಲೈನ್)ಯನ್ನು ಸಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ, ಬಿಇಓ ಶಂಕ್ರಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶರಪ್ಪ ಚೌವ್ಹಾಣ ಹಾಗೂ ಮಾಸ್ಟರ್ ಟ್ರೈನರ್‌ಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

ಅಚಲ ಆತ್ಮವಿಶ್ವಾಸಕ್ಕೆ ಅತಿಥಿ  ಆಡಿ ತಪ್ಪುವೆನೆಂದು ಎಂದು  ಆಡುವುದು ಬಿಡಲಿಲ್ಲ.

satyadarshana

ಬಾಬಾ ಸಾಹೇಬರ ಕಳೆದುಕೊಂಡ ಭಾರತ ಅನಾಥವಾಗಿದೆ: ಮಂಜು ಬುರುಡಿ

satyadarshana

ಗದಗ ನಗರದ ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ,

satyadarshana

Leave a Comment