Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಯುದ್ದದ ಪರಿಸ್ಥಿತಿಯನ್ನು ಜನರು ಹೇಗೆ ಎದುರಿಸಬೇಕು ಎಂದು ಜಾಗೃತಿ ಮೂಡಿಸುವುದಾಕ್ಕಾಗಿ ಅಣುಕು ಪ್ರದರ್ಶನ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್

ಗದಗ : ವೈಮಾನಿಕ ದಾಳಿ ಎದುರಾದಾಗ ಸ್ಥಳಿಯ ಜನರು ಭಯಭೀತರಾಗದೇ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕೈಗೊಳಲಾಯಿತು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ಹೇಳಿದರು.

ನಗರದ ವಿಡಿಎಸ್ ಟಿ ಮೈದಾನದಲ್ಲಿ ಗುರುವಾರ ನಡೆದ ಅಣುಕು ಪ್ರದರ್ಶನ ಜರುಗಿದ ನಂತರ ಮಾತಾನಾಡಿದ ಅವರು ಯುದ್ದದಂತಹ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರ ಹೇಗೆ ಕೆಲಸ ನಿರ್ವಹಿಸುತ್ತದೆ ಎಂದು ಅವರು ತಿಳಿಸಿದರು. ನಗರದಲ್ಲಿ ವೈಮಾನಿಕ ದಾಳಿಯಾದಾಗ ಅದಕ್ಕೆ ಇಲಾಖೆಅಧಕಾರಿಗಳು ಯಾವ ತರಹ ಕಾರ್ಯಾಚರಣೆ, ಪರಿಹಾರ ಕಂಡುಕೊಳ್ಳುತ್ತೇವೆ ಎನ್ನುವುದ ತಿಳಿಸುವ ಅಣುಕು ಪ್ರದರ್ಶನ ಇದಾಗಿದ್ದು , ಬಾಂಬ್ ಬಿದ್ದಿದೆ ಎಂದು ಮಾಹಿತಿ ತಿಳಿದ ಕೂಡಲೇ ಬಾಂಬ್ ಸ್ಕ್ವಾಡ್ ತಕ್ಷಣ ಹೋಗಿ ಸ್ಥಳಿಯ ಪರಿಸ್ಥಿತಿ ಅರಿತು ಇನ್ನೂ ಸ್ವೋಟಗೊಳ್ಳದ ಬಾಂಬ್ ಗಳನ್ನು ನಿಷ್ಕ್ರೀಯಗೊಳಿಸಿದರು,‌ ಪೊಲೀಸ್ ಅಗ್ನಿಶಾಮಕ ದಳ ಅಂಬುಲೆನ್ಸ ಸ್ವಯಂಸೇವಕರು ಬಂದು ಭಯಭೀತರಾದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದುರು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಗೊಳಿಸಲಾಯಿತು, ಪ್ರಥಮ ಚಿಕಿತ್ಸೆ ಯ ಕ್ಯಾಂಪ್ ಗಳನ್ನು ಪ್ರಾರಂಬಿಸಲಾಯಿತು ಅವುಗಳು ಪರಿಸ್ಥಿತಿ ಗನುಗುಣವಾಗಿ ಕಾರ್ಯಗಳನ್ನು ನಿಭಾಯಿಸುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಕೈಗೊಳ್ಳಲಾಯಿತು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾತನಾಡಿ ಅಣುಕು ಪ್ರದರ್ಶನ ಮೂಲಕ ಯಾವುದಾರರು ತುರ್ತುಸ್ಥಿತಿ ಎದುರಾದಾಗ ಅದನ್ನು ಎದುರಿಸಲು ಯಾವ ರೀತಿ ತಯಾರಿ ಆಗಿರಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಅಣುಕು ಪ್ರದರ್ಶನ ದಲ್ಲಿ 22 ಇಲಾಖೆ ಗಳು ಸೇರಿದಂತೆ ಎನ್ ಸಿ ಸಿ, ಎನ್ ಎಸ್ ಎಸ್ ,ಮಾಜಿ ಸೈನಿಕರು ಸ್ಕೌಟ್ಸ್ ಗೈಡ್ ಒಳಗೊಂಡು 300 ಜನ ಭಾಗವಹಿಸಿ ಬಾಂಬ್ ಸ್ಫೋಟವಾದಾಗ ಅದಕ್ಕೆ ಯಾವ ರೀತಿ ಪ್ರತೀಕ್ರೀಯೆ ನೀಡಬೇಕು. ಅಲರ್ಟ ಮೇಸೆಜ್ ಬಂದ ತಕ್ಷಣ ಯಾವ ತಂಡ ಯಾವ ಕೆಲಸವನ್ನು ಮಾಡಬೇಕು ಎನ್ನುವ ಜವಾಬ್ದಾರಿಗಳನ್ನು ಈ ಮೂಲಕ ತಿಳಿಸಲಾಯಿತು. ಅಣುಕು ಪ್ರದರ್ಶನ ದಲ್ಲಿ 18 ತಂಡಗಳು ಭಾಗವಹಿಸಿದ್ದವು ಎಂದು ತಿಳಿಸಿದರು.

ಅಣಕು ಪ್ರದರ್ಶನದ ನೈಜ ವಿವರ: ವೈಮಾನಿಕ ದಾಳಿಯಿಂದ ನಗರದ ಮನೆಗಳಿಗೆ ಬೆಂಕಿ ಹತ್ತಿ ಉರಿದವು ಮನೆಯಲ್ಲಿದ್ದ ಜನರು ಬೆಂಕಿಯಿಂದ ಗಾಯಗೊಂಡರು ದಾಳಿಯಿಂದ ಸುತ್ತಮುತ್ತಲಿನ ಜನರು ಮಕ್ಕಳು ಭಯಭೀತರಾದರು ಕೆಲವರಿಗೆ ಗಂಭೀರ ಗಾಯ ಸಂಭವಿಸಿ ಸ್ಥಳದಲ್ಲಿಯೇ ಮೂರ್ಛೆ ಹೋದರು. ವೈಮಾನಿಕ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ದೌಡಾಯಿಸಿ ಅಗ್ನಿ ನಂದಿಸುವ ಕೆಲಸ ಪ್ರಾರಂಭಿಸಿದರು ,ಅಗ್ನಿ ಸಂಭವಿಸಿದ ಮನೆಯೊಳಗಿದ್ದ ಜನರನ್ನು ಮನೆಯೊಳಗೆ ಹೋಗಿ ಹೋರ ತಂದು ಸಂರಕ್ಷಿಸಿದರು , ತುರ್ತು ಪರಿಸ್ಥಿತಿ ಸಹಾಯವಾಣಿಯನ್ನು ಪ್ರಾರಂಭಿಸಿದರು ,ಅಂಬುಲೆನ್ಸ ಗಳು ಬಂದ ತಕ್ಷಣ ಸ್ಥಳದಲ್ಲಿದ ಪೊಲೀಸ್ ಸಹಾಯದಿಂದ ಗಾಯಾಳುಗಳನ್ನು ಎತ್ತುಗೊಂಡು ಆಸ್ಪತ್ರೆ ಗೆ ಸ್ಥಳಾಂತರಗೊಳಿಸುವ ಕಾರ್ಯ ಪ್ರಾರಂಭಿಸಿದರು. ಜನರಿಗೆ ಪ್ರಥಮ ಚಿಕಿತ್ಸಾ ಕ್ಯಾಂಪ್ಗಳನ್ನು ಪ್ರಾರಂಭವಾಯಿತು, ಸ್ತಳಕ್ಕೆ ದೌಡಾಯಿಸಿದ ರಾಜ್ಯ ವಿಪತ್ತು ಪರಿಹಾರ ತಂಡ , ಎಸ್ಕಾಂ ಎನ್ ಸಿ ಸಿ , ಎನ್ ಎಸ್ ಎಸ್ , ಸ್ಕೌಟ್ಸ್ ಗೈಡ್ಸ ತಂಡದವರು ಪರಿಸ್ಥಿತಿ ನಿರ್ವಹಣೆಯಲ್ಲಿ ಪಾಲ್ಗೊಂಡರು

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ ಬಿ ಸಂಕದ, ಪೊಲೀಸ್ ಹಿರಿಯ ಅಧಿಕಾರಿಗಳು ,ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು,ವಿದ್ಯಾರ್ಥಿಗಳು ಸಾರ್ವಜನಿಕರು ಹಾಜರಿದ್ದರು.

 

Related posts

ಪತ್ತೆಯಾದ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು CPY ಬಾವ ಮಹದೇವಯ್ಯ ಕಿಡ್ನಾಪ್ ಅಪಹರಣ…

satyadarshana

ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ ಕಂಠೀರವ ಕ್ರೀಡಾಂಗಣದಲ್ಲಿ ಅಪ್ಪು ಅಂತಿಮ ದರ್ಶನ

satyadarshana

ಪ್ರತಿ ವರ್ಷ ಆಯುಧ ಪೂಜೆಯ ದಿನ ದೇವರಗುಡ್ಡದ ಕಾರ್ಣಿಕೋತ್ಸವ:| ಯುವಕನಿಗೆ ಸಿಎಂ ಪಟ್ಟ, ಬೆಳೆ ಉತ್ತಮ. ಗೊರವಪ್ಪನ ಭವಿಷ್ಯವಾಣಿ

satyadarshana

Leave a Comment