ಗಜೇಂದ್ರಗಡ. ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶರಣು ಪೂಜಾರ ಅಭಿಪ್ರಾಯಪಟ್ಟರು
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು, ರಚಿಸಿದ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಎಂಬುದನ್ನು ಸಾರಿದ್ದಾರೆ. ಭಾರತ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದಲ್ಲಿ ಭಯುಮುಕ್ತವಾಗಿ ಬದುಕುವ ಹಕ್ಕನ್ನು ಕಲ್ಪಿಸಲಾಗಿದೆ ಎಂದ ಶರಣು ಪೂಜಾರಿ ಅವರು, ಅಂಬೇಡ್ಕರ್ ಅವರ ತತ್ವ-ಸಿದ್ದಾಂತವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ಆಚರಣೆ: ದಲಿತ ಸಂಘರ್ಷ ಸಮಿತಿ (DSS) ಮತ್ತು ಇತರ ಸಂಘಟನೆಗಳು ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು “ಸಮಾನತೆಯ ದಿನ”ವನ್ನಾಗಿ ಆಚರಿಸಿದವು.
ಕಾರ್ಯಕ್ರಮದ ಕೊನೆಯಲ್ಲಿ ಭವ್ಯ ಮೆರವಣಿಗೆ ನಡೆಯಿತು. ವಿವಿಧ ವಾದ್ಯಮೇಳಗಳು, ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಮೆರವಣಿಗೆ ಗಮನಸೆಳೆಯಿತು.
