Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಸಾಧನೆ

ವಸತಿ ನಿಲಯಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ                                      ದಾಖಲೆ ಏರಿಕೆ

ಕೊಪ್ಪಳ ಏಪ್ರಿಲ್ 25 : ಏಪ್ರಿಲ್ 23ರಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಇಲಾಖೆಯ ಅಡಿಯಲ್ಲಿ ಬರುವ 2 ವಸತಿ ನಿಲಯಗಳ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಶೈಕ್ಷಣಿಕ ಗುಣಮಟ್ಟವನ್ನು ಎತ್ತಿ ಹಿಡಿದಿದ್ದಾರೆ.

ಪರೀಕ್ಷೆಗೆ ಒಟ್ಟು 21 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 18 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಕೇವಲ 3 ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಸೇರಿದಂತೆ ಒಟ್ಟು 18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಸತಿ ನಿಲಯಗಳಲ್ಲಿ ನೀಡಲಾದ ವಿಶೇಷ ತರಗತಿಗಳು ಮತ್ತು ಶಿಸ್ತುಬದ್ಧ ವ್ಯಾಸಂಗ ಕ್ರಮವೇ ಈ ಯಶಸ್ಸಿಗೆ ಕಾರಣ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Related posts

ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ಪ್ರಮಾಣದಲ್ಲಿ ಲಭ್ಯ

satyadarshana

ಆರ್‌ಬಿಐ ನಿರ್ಮಾಣದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪಾತ್ರ ದೊಡ್ಡದು..

satyadarshana

ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಸ್ವಾತಂತ್ರ್ಯ ದಿನಾಚರಣೆದಂದು ಜನಿಸಿದ ಮಗುವಿನ ಹುಟ್ಟುಹಬ್ಬ ಆಚರಣೆ!

satyadarshana

Leave a Comment