Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿಬಲಿ, ಮದ್ಯಪಾನ ನಿಷೇಧಕ್ಕೆ ಕ್ರಮ ಕೈಗೊಳ್ಳಿ: ಡಾ.ಸುರೇಶ ಇಟ್ನಾಳ

ಕೊಪ್ಪಳ  :ಮೇ 03: ಶ್ರೀ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಾಣಿಬಲಿ ಮತ್ತು ಮದ್ಯಪಾನವನ್ನು ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈಗಾಗಲೇ ಹುಲಿಗಿ ಕ್ಷೇತ್ರದಲ್ಲಿ ಪ್ರಾಣಿಬಲಿ ನಿಷೇಧ ಜಾರಿಯಲ್ಲಿದ್ದು, ಜಾತ್ರಾ ನಂತರ ಒಂದು ತಿಂಗಳ ಕಾಲ ಪ್ರಾಣಿಬಲಿ ನಡೆಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ಬಗ್ಗೆ ವಾರ್ಷಿಕ ಜಾತ್ರೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕಾಗಿ ಹೊಸಪೇಟೆ, ಶಿವಪುರ ರಸ್ತೆ, ಹಿಟ್ನಾಟ್, ಹೊಸಪೇಟೆಯ ಹೊಸೂರಿನಿಂದ ನದಿ ಮಾರ್ಗದಲ್ಲಿ ಚಕ್ ಪೋಸ್ಟ್ಗಳನ್ನು ನಿರ್ಮಿಸಿ, ಕ್ಷೇತ್ರಕ್ಕೆ ಯಾವುದೇ ಪ್ರಾಣಿಗಳನ್ನು ತರದಂತೆ ಸಂಬಂಧಿಸಿದ ಪೊಲೀಸ್ ಠಾಣೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಪ್ರಾಣಿ ಬಲಿ ನಿಷೇಧಗೊಳಿಸಲು ಧ್ವನಿವರ್ಧಕಗಳ ಮತ್ತು ಸೂಚನಾ ಫಲಕಗಳ ಮುಖಾಂತರ ಜಾಗೃತಿ ಮೂಡಿಸಲು ಮತ್ತು ವ್ಯಾಪಕ ಪ್ರಚಾರಕ್ಕೆ ಅಗತ್ಯ ಕೈಗೊಳ್ಳಬೇಕು. ಭಕ್ತರು ದೇವಸ್ಥಾನದ ಒಳಗಡೆ ಯಾವುದೇ ಪ್ರಾಣಿಗಳನ್ನು ತರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಪೊಲೀಸ್ ಉಪ ಅಧೀಕ್ಷಕರು, ತಹಶೀಲ್ದಾರರು, ಮುನಿರಾಬಾದ್ ಪೊಲೀಸ್ ಠಾಣೆಯ ಆರಕ್ಷಕ ಠಾಣೆಯ ಆರಕ್ಷಕ ಉಪನಿರೀಕ್ಷಕರು, ಕೊಪ್ಪಳ ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಕ್ಷೇತ್ರದಲ್ಲಿ ಜಾತ್ರಾ ಸಮಯದಲ್ಲಿ ಮದ್ಯಪಾನ ನಿಷೇಧ: ಜಾತ್ರಾ ಅವಧಿಯಲ್ಲಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಮಧ್ಯಪಾನ ಮಾಡಿ ಪಾನಮತ್ತರಾಗಿ ಕ್ಷೇತ್ರದಲ್ಲಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ, ಉಳಿದ ಎಲ್ಲಾ ಭಕ್ತರಿಗೆ ತೊಂದರೆಯಾಗುವುದರಿಂದ ಹಾಗೂ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯಪಾನ ನಿಷೇದ ಮಾಡುವ ಬಗ್ಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಹಾಜರಿದ್ದ ಕೊಪ್ಪಳ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿ, ಅಲ್ಲದೇ ಹುಲಿಗಿ ಕ್ಷೇತ್ರದಲ್ಲಿರುವ ಮದ್ಯಪಾನ ಮಾರಾಟ ಅಂಗಡಿಗಳನ್ನು ಮಹಾರಥೋತ್ಸವದ ದಿನದಂದು ಹುಲಿಗಿ, ಹೊಸಳ್ಳಿ, ಸಿಂಗಾಪೂರ, ಹಿಟ್ನಾಟ್ ಗ್ರಾಮಗಳಲ್ಲಿ ಮದ್ಯಪಾನ ಮಾರಾಟ ನಿಷೇಧ ಮಾಡುವ ಬಗ್ಗೆ ಅಬಕಾರಿ ಇಲಾಖೆರವರು ಸೂಕ್ತ ಆದೇಶ ಹೊರಡಿಸುವಂತೆ ತಿಳಿಸಿದರು.

Related posts

ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಕಂಪ್ಯೂಟರ್ ಆಪರೇಟರ್.

satyadarshana

ಆಗಸ್ಟ್ 1ರಂದು ವ್ಯಸನಮುಕ್ತ ದಿನಾಚರಣೆ

satyadarshana

2023 ರ ಸ್ವಾತಂತ್ರೊö್ಯÃತ್ಸವ ದಿನಾಚರಣೆ ನಿಮಿತ್ಯ ಅತ್ಯುತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಪುರಸ್ಕಾರ ಪಡೆದವರ ಮಾಹಿತಿ ನೀಡುವ ಕುರಿತು.

satyadarshana

Leave a Comment