Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಶಾಸಕ ಜಿ.ಎಸ್. ಪಾಟೀಲಗೆ ಸಚಿವ ಸ್ಥಾನ ನೀಡಲು ಆಗ್ರಹ

ಶಾಸಕ ಜಿ.ಎಸ್. ಪಾಟೀಲಗೆ ಸಚಿವ ಸ್ಥಾನ ನೀಡಲು ಆಗ್ರಹ

ನರೇಗಲ್ ಬ್ಲಾಕ್ ಕಾಂಗ್ರೆಸ್ ನಿಂದ ಒತ್ತಾಯ

ಸಚಿವ ಸ್ಥಾನ ನೀಡದಿದ್ದರೆ ಪ್ರತಿಭಟನೆ ; ಎಚ್ಚರಿಕೆ

​ನರೇಗಲ್: ಗದಗ ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಅಭಿವೃದ್ಧಿ ಹರಿಕಾರ ಎಂದು ಹೆಸರು ಪಡೆದಿರುವ ಶಾಸಕ ಜಿ.ಎಸ್. ಪಾಟೀಲರ ಅವರು ಕಾಂಗ್ರೆಸ್ ಪಕ್ಷಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಹಿರಿತನ ಆಧರಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನರೇಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಬೆಟಗೇರಿ ಹೈಕಮಾಂಡ್‌ಗೆ ಒತ್ತಾಯಿಸಿದರು.

ನರೇಗಲ್ ​ಪಟ್ಟಣದಲ್ಲಿ ಸೋಮವಾರ ನರೇಗಲ್ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ನಾಲ್ಕು ಬಾರಿ ಶಾಸಕರಾಗಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾಗಿ, ಗದಗ ಜಿಲ್ಲಾ ಅಧ್ಯಕ್ಷರಾಗಿ ಜಿ.ಎಸ್.ಪಾಟೀಲ ಅವರು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇಲ್ಲಿಯವರೆಗೆ ಪಕ್ಷ ಸಂಘಟಗೆ, ಕ್ಷೇತ್ರದ ಅಭಿವೃದ್ಧಿಗೆ ದುಡಿದ್ದಾರೆ ಅವರ ಸೇವೆ ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಗಜೇಂದ್ರಗಡ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ ಮಾತನಾಡಿ, ಜಿ.ಎಸ್.ಪಾಟೀಲ ಅವರು ಜಲ ಅಭಿವೃದ್ಧಿ, ರೈತರ ಭೂಮಿ ಹಿತ ಕಾಪಾಡಲು ಕ್ಷೇತ್ರಾದ್ಯಂತ ಸಾಕಷ್ಟು ಕೆರೆಗಳನ್ನು ನಿರ್ಮಿಸಿ ಸಾವಿರ ಕೆರೆಗಳ ಸರದಾರ ಎಂದು ಹೆಸರು ಮಾಡಿದ್ದಾರೆ. ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಿ ಜೀವನ ಕಲ್ಪಿಸಿಕೊಟ್ಟಿದ್ದಾರೆ. ದೀನ ದಲಿತರಿಗೆ, ಹಿಂದುಳಿದ ವರ್ಗಗಳ ಜನರಿಗೆ ಶ್ರಮಿಕರಿಗೆ ಬದುಕು ಇಟ್ಟುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಇಂತಹ ನಾಯಕರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡುತ್ತಾ ಬರಲಾಗಿದೆ. ಈಗಲಾದರು ಸಚಿವಸ್ಥಾನ ನೀಡಿ ಸರಿಪಡಿಸಬೇಕು ಎಂದರು. ಈ ಬಾರಿ ಸಚಿವ ಸ್ಥಾನ ನೀಡದಿದ್ದರೆ ಎಲ್ಲ ಕಾರ್ಯಕರ್ತರು ಸೇರಿ ತೀವ್ರತರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

​ ಸತತ 45 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿ ಪಕ್ಷ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂದಿರಾ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ಹಾಗೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ ಜಿ.ಎಸ್.ಪಾಟೀಲರಿಗೆ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ನಿಂಗನೌಡ ಲಕ್ಕನಗೌಡ್ರ, ಅಲ್ಲಾಬಕ್ಷಿ ನದಾಫ್, ಸಂತೋಷ ಹನಮಸಾಗರ, ಶೇಖಪ್ಪ ಜುಟ್ಲ, ಗುಡದಪ್ಪ ಗೋಡಿ, ಮುತ್ತಪ್ಪ ನೂಲ್ಕಿ ಇದ್ದರು.

​ನರೇಗಲ್ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿದರು

ನರೇಗಲ್ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಗಜೇಂದ್ರಗಡ ತಾಲ್ಲೂಕು ಪ್ರಚಾರ ಸಮಿತಿ ಅಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ ಮಾತನಾಡಿದರು

Related posts

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ ಮಾಡಲಾಗುತ್ತಿದೆ” : ಹೆಚ್ಡಿಕೆ ಆಕ್ರೋಶ

satyadarshana

ವಿಧಾನ ಪರಿಷತ್ ಚುನಾವಣೆಯಲ್ಲಿʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.ಎಚ್‌ಡಿಕೆ

satyadarshana

ಸರ್ಕಾರ ರಚಿಸಲು ತಯಾರಿ ನಡೆಸಿದ ಕಾಂಗ್ರೆಸ್‌ * ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ವಹಿಸಿದ ಎಐಸಿಸಿ

satyadarshana

Leave a Comment