Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಾಹಿತಿ ನೀಡದ ಅಧಿಕಾರಿಗಳಿಗೆ 25 ಸಾವಿರ ರೂಪಾಯಿ ದಂಡ

 

ಗದಗ: ಜೂನ್ 24: ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 60 ರಿಂದ 100 ಅರ್ಜಿಗಳ ವಿಚಾರಣೆಯು ಆಫ್ಲೆöÊನ್ ಮತ್ತು ಆನ್ಲೆöÊನ್ ಮಾದರಿಯಲ್ಲಿ ನಡೆಯುತ್ತಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರು ಕೇಳಿದ ಮಾಹಿತಿಯನ್ನು ನೀಡದೆ ಸತಾಯಿಸುವ ಅಧಿಕಾರಿಗಳ ವಿರುದ್ಧ ಆಯೋಗವು ಕಠಿಣ ಕ್ರಮ ಕೈಗೊಳ್ಳಲಾಗುವುದು.

ಮಾಹಿತಿ ಹಕ್ಕು ಕಾಯ್ದೆಯು ಜನಪರ ಮತ್ತು ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ. ಸ್ವತಂತ್ರ ಭಾರತದಲ್ಲಿ ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕು ಎಂಬ ಉದ್ದೇಶ ಹೊಂದಿರುವ ಇದು ಅತ್ಯಂತ ಕ್ರಾಂತಿಕಾರಕ ಕಾಯ್ದೆಯಾಗಿದೆ.

ಮಾಹಿತಿಯನ್ನು ಸಾಮಾನ್ಯ ಜನರಿಗೆ ನೀಡದಿರುವುದು, ಆಯೋಗದ ವಿಚಾರಣೆಗೆ ಗೈರು ಹಾಜರಾಗುವುದು ಹಾಗೂ ಆಯೋಗ ನೀಡುವ ನೋಟಿಸ್ಗಳಿಗೆ ಸ್ಪಂದಿಸದಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುತ್ತದೆ.

ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ವಿಚಾರಣಾ ಸಮಿತಿಗೆ ಶಿಫಾರಸು ಮಾಡುವುದರ ಜೊತೆಗೆ, ರೂ. 25,000/- ದವರೆಗೆ ದಂಡ ಹಾಗೂ ಅರ್ಜಿದಾರರಿಗೆ ಸೂಕ್ತ ಪರಿಹಾರ ನೀಡುವ ಆದೇಶಗಳನ್ನು ಆಯೋಗವು ಹೊರಡಿಸಲಾಗುವುದು ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related posts

ಪಿಎಸ್​ಐ ಮನೆಗೆ ಚೋರರು ಕನ್ನ..

satyadarshana

ಕ್ಷುಲ್ಲಕ ಕಾರಣಕ್ಕೆ ಗಲಾಟೆ, ವ್ಯಕ್ತಿ ಮೇಲೆ ಹಲ್ಯೆ.

satyadarshana

223ನೇ ದಿನದ ಬಲ್ಡೋಟ ಕಾರ್ಖಾನೆ, ಮಾಲಿನ್ಯ ವಿರೋಧಿ ಹೋರಾಟ ಯಶಸ್ವಿ;

satyadarshana

Leave a Comment