ಗದಗ : 24 : 2026-27 ರ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆ ನಷ್ಟದಿಂದ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರೈತ ಸುರಕ್ಷಾ ಪ್ರದಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅರ್ಹ ರೈತರ ನೋಂದಣಿಗೆ ಕ್ರಮ ಕೈಗೊಳ್ಳುವಂತೆ ಸಂಬAಧಿತ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬಿಮಾ ಯೋಜನೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಮಟ್ಟದಲ್ಲಿ ರೈತರಿಗೆ ಯೋಜನೆ ಕುರಿತು ಜಾಗೃತಿ ಮೂಡಿಸಿ ನೋಂದಣಿಗೆ ಕ್ರಮ ವಹಿಸಬೇಕೆಂದರು.
ಹವಾಮಾನ ವೈಪರೀತ್ಯ, ಅತೀವೃಷ್ಟಿ ಅನಾವೃಷ್ಟಿ, ಗಾಳಿ ಮಳೆ ಪ್ರವಾಹ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾದ ಸಂದರ್ಭದಲ್ಲಿ ರೈತರಿಗೆ ಸೂಕ್ತ ಪರಿಹಾರ ದೊರೆಯಲು ಬೆಳೆ ಕಟಾವು ಪ್ರಯೋಗಗಳನ್ನು ಪಾರದರ್ಶಕವಾಗಿ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಇಂಡಸ್ ಇಂಡ್ ಜನರಲ್ ಇನ್ಸೂರನ್ಸ್ ಕಂಪನಿ ಅನುಷ್ಠಾನ ವಿಮಾ ಸಂಸ್ಥೆಯಾಗಿ ಆಯ್ಕೆಯಾಗಿರುತ್ತದೆ. ಕಂಪನಿಯ ಪ್ರತಿನಿಧಿಗಳು ಪ್ರತಿ ತಾಲೂಕಾ ಕಚೇರಿಗೆ ಸರಿಯಾಗಿ ಕೆಲಸ ಮಾಡುವ ಪ್ರತಿನಿಧಿಗಳನ್ನು ನಿಯೋಜನೆ ಮಾಡಬೇಕು ಎಂದರು. ಆಸಕ್ತ ರೈತರು ಬೆಳೆ ವಿಮೆ ತುಂಬಲು ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಬೆಳೆ ವಿಮೆ ತುಂಬುವAತಾಗಬೇಕು. ಬೆಳೆ ವಿಮೆ ಮಾಡಿಸುವ ರೈತರು Fruit FID ಅನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ರೈತರು ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ / ಖಾತೆ ಪುಸ್ತಕ / ಕಂದಾಯ ರಶೀದಿಯನ್ನು ಸಂಬAಧಿಸಿದ ಬ್ಯಾಂಕ,ಹತ್ತಿರದ ಸಾರ್ವಜನಿಕ ಸೇವಾಕೇಂದ್ರ ( Common Service Centre ), ಗ್ರಾಮ ಒನ್ ಕೇಂದ್ರಗಳಲ್ಲಿ ನೀಡಿ “ಸಂರಕ್ಷಣೆ ಪೋರ್ಟಲ್” ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.
ಜAಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ಮಾತನಾಡಿ ಬೆಳೆವಾರು ವಿಮಾ ಕಂತು ಪಾವತಿ ಕುರಿತು ಮಾಹಿತಿ ನೀಡಿದರು. ಬೆಳೆ ಸಾಲ ಪಡೆದ ರೈತರಿಗೆ ಈ ಯೋಜನೆ ಕಡ್ಡಾಯವಾಗಿದ್ದು ಒಂದು ವೇಳೆ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸದೇ ಇದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿAತ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರ ನೀಡಿದಲ್ಲಿ ಅಂತಹ ರೈತರನ್ನು ಈ ಯೋಜನೆಯಿಂದ ಕೈಬಿಡಲಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರದಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತು ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ.ವಿ, ಡಿಡಿಎಲ್ ಆರ್ ರುದ್ರಣ್ಣಗೌಡ, ಕೃಷಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಸ್ಪೂರ್ತಿ , ಸಹಾಯಕ ಕೃಷಿ ನಿರ್ದೇಶಕರುಗಳು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಮುಂಗಾರು ಹಂಗಾಮಿನ ಬೆಳೆ ವಿಮಾ ಕಂತು ತುಂಬಲು ಕೊನೆಯ ದಿನಾಂಕಗಳು
ಜುಲೈ 15 – ಹೆಸರು ( ಮಳೆಯಾಶ್ರಿತ) , ಹತ್ತಿ ( ಮಳೆ ಆಶ್ರಿತ & ನೀರಾವರಿ) ಬೆಳೆಗಳಿಗೆ.
ಜುಲೈ 31 – ಗೋವಿನಜೋಳ (ಮ ಆ & ನೀರಾವರಿ), ಸಜ್ಜೆ ( ಮ ಆ), ತೊಗರಿ( ಮ ಆ) ,
ಶೇಂಗಾ ( ಮ ಆ & ನೀರಾವರಿ) , ಭತ್ತ ( ನೀರಾವರಿ). ಬೆಳೆಗಳಿಗೆ
ಅಗಸ್ಟ 14- ಸೂರ್ಯಕಾಂತಿ ( ಮ.ಆ & ನೀರಾವರಿ) ಬೆಳೆಗಳಿಗೆ.
