Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಸಮಯ ಬದಲಾವಣೆ

ಕೊಪ್ಪಳ ಜುಲೈ 30: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಸಮಯ ಬದಲಾವಣೆಯಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪೊಲೀಸ್ ಇಲಾಖೆಯಿಂದ ನೀಡಲಾದ ಅಧಿಸೂಚನೆಯನ್ನು ದಿನಾಂಕ 05.06.2026 ರಂದು ಪ್ರಕಟಿಸಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 02.08.2026 ರಂದು ಮಧ್ಯಾಹ್ನ 2.30 ರಿಂದ 4 ಗಂಟೆಯವರೆಗೆ ಎಂದು ಪ್ರಕಟಿಸಲಾಗಿತ್ತು.

ಆದರೆ, ಕೆಲವು ಅಭ್ಯರ್ಥಿಗಳು ಮಧ್ಯಾಹ್ನದ ಪರೀಕ್ಷಾ ಕೇಂದ್ರಗಳು ಬೆಳಿಗ್ಗೆಯ ಪರೀಕ್ಷಾ ಕೇಂದ್ರದಿಂದ ದೂರವಿರುವುದರಿಂದ, ಪರೀಕ್ಷೆ ಮುಗಿಸಿ ಮಧ್ಯಾಹ್ನದ ಪರೀಕ್ಷಾ ಕೇಂದ್ರಕ್ಕೆ ತೆರಳುವುದು ಕಷ್ಟವಾಗುತ್ತದೆ ಎಂದು ಪ್ರಾಧಿಕಾರಕ್ಕೆ ಮನವಿಗಳನ್ನು ಸಲ್ಲಿಸಿರುತ್ತಾರೆ. ಆದರಂತೆ ಅಭ್ಯರ್ಥಿಗಳ ಹಿತ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಸಾಮಾನ್ಯ ಜ್ಞಾನ, ವಿಜ್ಞಾನ, ಭೂಗೋಳ, ಇತಿಹಾಸ, ಭಾರತದ ಸಂವಿಧಾನ, ರಾಷ್ಟ್ರೀಯ ಸ್ವಾತಂತ್ರ‍್ಯ ಚಳವಳಿ, ಮಾನಸಿಕ ಸಾಮರ್ಥ್ಯ ಮತ್ತು ನೈತಿಕ ಶಿಕ್ಷಣ ಒಳಗೊಂಡ ಸಾಮಾನ್ಯ ಅಧ್ಯಯನ ವಿಷಯಗಳ ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಆ. 02ರ ಸಂಜೆ 4 ರಿಂದ 5.30 ರವರೆಗೆ ನಡೆಯಲಿದೆ.

ಈ ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 05.06.2026ರ ಅಧಿಸೂಚನೆಯಲ್ಲಿ ತಿಳಿಸಲಾದ ಉಳಿದ ಯಾವುದೇ ನಿಯಮ ಹಾಗೂ ವಿವರಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

satyadarshana

ಕರ್ನಾಟಕ ನದಾಫ್ ಪಿಂಜಾರ್ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪೆನ್ನು ಮತ್ತು ನೋಟ ಪುಸ್ತಕ ಹಾಗೂ ಅಂಕಲಿಪಿ ವಿತರಣೆ

satyadarshana

ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಣ್ಣ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ.

satyadarshana

Leave a Comment