ಕೊಪ್ಪಳ, ಸೆ.30: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ. ರಾಜಶೇಖರ ಅವರ ಆದೇಶ ಹಾಗೂ ರಾಜ್ಯ ಸಮಿತಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಅವರ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲಾ ಘಟಕಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಉತ್ತರ ಕರ್ನಾಟಕದ ‘ನೈಜತೆಯ ತಿರುವು’ ದಿನಪತ್ರಿಕೆಯ ಸಂಪಾದಕ ಕನಕಪ್ಪ ಕೆ. ತಳವಾರ ಅವರನ್ನು ಕೊಪ್ಪಳ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಜಿಲ್ಲಾ ವ್ಯಾಪ್ತಿಯ ಸಂಘಟನಾ ಜವಾಬ್ದಾರಿಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯ ಆರು ತಾಲೂಕುಗಳಲ್ಲಿ ಸಂಘದ ಹೊಸ ಸದಸ್ಯರನ್ನು ನೇಮಕ ಮಾಡುವುದು, ಸದಸ್ಯತ್ವವನ್ನು ವಿಸ್ತರಿಸುವುದು ಹಾಗೂ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಇದೇ ವೇಳೆ ‘ಭೀಮ ಘರ್ಜನೆ ಪತ್ರಿಕೆಯ ಸಂಪಾದಕ ರಮೇಶ್ ಕೋಟಿ ಅವರನ್ನು ಜಿಲ್ಲಾ ಗೌರವಾಧ್ಯಕ್ಷರಾಗಿ ಹಾಗೂ ‘ಪ್ರಜಾವಾಣಿ ಸೆಕ್ಯುಲರ್’ ಸಂಪಾದಕ *ಸೈಯದ್ ಬಾಷಾ* ಅವರನ್ನು ಅವರ ಖಾಸಗಿ ಕಚೇರಿಯಲ್ಲಿ ರಾಜ್ಯ ಸಮಿತಿ ಸದಸ್ಯ ಮಲ್ಲಿಕಾರ್ಜುನ್ ಅವರ ಉಪಸ್ಥಿತಿಯಲ್ಲಿ *ಜಿಲ್ಲಾ ಉಪಾಧ್ಯಕ್ಷರಾಗಿ* ನೇಮಕ ಮಾಡಲಾಗಿದೆ.
ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಕೈಗೊಂಡು, ಆಯ್ಕೆಯಾದವರ ವಿವರಗಳನ್ನು ರಾಜ್ಯ ಸಮಿತಿಗೆ ಸಲ್ಲಿಸಿ ಅನುಮೋದನೆ ಪಡೆದು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರ ನೀಡಲಾಗಿದೆ.
ಸಂಘದ ನಿಯಮ, ನಿಯಮಾವಳಿ ಹಾಗೂ ರಾಜ್ಯ ಸಮಿತಿಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಿ, ಜಿಲ್ಲೆಯ ಎಲ್ಲಾ ಪತ್ರಕರ್ತರನ್ನು ಒಗ್ಗೂಡಿಸಿಕೊಂಡು ಕೊಪ್ಪಳ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವಂತೆ ಕನಕಪ್ಪ ಕೆ. ತಳವಾರ ಅವರಿಗೆ ಸೂಚಿಸಲಾಗಿದೆ.
